ಬೆಂಗಳೂರು: ಏಪ್ರಿಲ್ 2022ರಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು ರೂ.1000ಕ್ಕೆ ಹೆಚ್ಚಿಸಲಾಗಿತ್ತು. ಈ ಗೌರವಧನ ಸೇರಿದಂತೆ ಬಾಕಿ ಗೌರವಧನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿ ಆದೇಶಿಸಿದೆ.
ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. 2021-22ನೇ ಸಾಲಿನ ಆಶಾ ಕಾರ್ಯಕರ್ತೆಯರಿಗೆ ಗೌರವಧನ ವಿತರಣೆ ಮಾಡಲು ಮೂರನೇ ತ್ರೈ ಮಾಸಿಕ ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.
ಡಿ ಬಿಟಿ ಪೋರ್ಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು ಪಾವತಿಸವುದಾಗಿ ಸರ್ಕಾರ ಆದೇಶಿಸಿದೆ. ಏಪ್ರಿಲ್ 2022ರ ತಿಂಗಳಿನಿಂದ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ರೂ.1000ಕ್ಕೆ ಹೆಚ್ಚಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ.
2022-23ನೇ ಸಾಲಿಗೆ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಗೆ ಎರಡನೇ ತ್ರೈ-ಮಾಸಿಕ ಅವಧಿಗೆ ರೂ.6378.30 ಲಕ್ಷಗಳ ಅನುದಾನ ಬಿಡುಗಡೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


