ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಕುಣಿಗಲ್, ತುಮಕೂರು, ಗುಬ್ಬಿ, ಶಿರಾ, ಪಾವಗಡ ಮತ್ತು ಮಧುಗಿರಿ ತಾಲ್ಲೂಕುಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ 29 ವಿವಿಧ ಗ್ರಾಮ ಪಂಚಾಯತಿಯ 30 ಸದಸ್ಯ ಸ್ಥಾನಗಳಿಗೆ ನವೆಂಬರ್ 23ರಂದು ಉಪ ಚುನಾವಣೆ ನಡೆಯಲಿದೆ.
ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಉಪ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಈ ಆದೇಶವು ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲಿನ ಅವಧಿಯಲ್ಲಿ ಅಂದರೆ ನವೆಂಬರ್ 21ರ ಸಂಜೆ 5 ರಿಂದ ನವೆಂಬರ್ 23ರ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಒಂದು ವೇಳೆ ಸದರಿ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿ ಚುನಾವಣೆ ನಡೆಯದಿದ್ದಲ್ಲಿ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಅವರು ಆದೇಶಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q