ಬಾಗಲಕೋಟೆ: ಕ್ಷೌರಿಕನೋರ್ವ ಗ್ರಾಹಕನನ್ನು ಕತ್ತರಿಯಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಘಟನೆ ಆಸಂಗಿಯಲ್ಲಿ ನಡೆದಿದ್ದು, 22 ವರ್ಷ ವಯಸ್ಸಿನ ಸಾಗರ್ ಅವಟಿ ಎಂಬಾತ ಮೃತಪಟ್ಟ ಗ್ರಾಹಕ ಎಂದು ಗುರುತಿಸಲಾಗಿದೆ.
ಬಾಗಲಕೋಟೆ ಜಿಲ್ಲೆ ರಬಕವಿ -ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಜ್ವಲ್ ಜೆಂಟ್ಸ್ ಪಾರ್ಲರ್ ಮಾಲೀಕ ಸದಾಶಿವ ನಾವಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ತಲೆಗೆ ಬಣ್ಣ ಹಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದ ನಂತರ ಹತ್ಯೆ ನಡೆದಿದೆ ಎನ್ನಲಾಗಿದೆ. ಸದಾಶಿವ ನಾವಿ ಗ್ರಾಹಕ ಸಾಗರ್ ನನ್ನು ಕತ್ತರಿಯಿಂದ ಇರಿದಿದ್ದು, ಈ ವೇಳೆ ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಎಂದು ತಿಳಿದು ಬಂದಿದೆ.
ಆರೋಪಿ ಸದಾಶಿವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


