nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರು ತೆಗೆದುಕೊಳ್ಳಲು ಬಂದ ಗ್ರಾಹಕನಿಗೆ ಸಿಬ್ಬಂದಿಯಿಂದ ಅವಮಾನ:  ತಕ್ಕ ಪಾಠವನ್ನು ಕಲಿಸಿದ ಗ್ರಾಹಕ
    ತುಮಕೂರು January 22, 2022

    ಕಾರು ತೆಗೆದುಕೊಳ್ಳಲು ಬಂದ ಗ್ರಾಹಕನಿಗೆ ಸಿಬ್ಬಂದಿಯಿಂದ ಅವಮಾನ:  ತಕ್ಕ ಪಾಠವನ್ನು ಕಲಿಸಿದ ಗ್ರಾಹಕ

    By adminJanuary 22, 2022No Comments2 Mins Read
    grahaka

    ತುಮಕೂರು: ಪ್ರತಿಯೊಬ್ಬ ಮನುಷ್ಯನಿಗೂ ತಾವು ಸುಖೀ ಜೀವನ ನಡೆಸಲು ಒಂದು ಮನೆ, ಒಂದು ಕಾರು, ಪುಟ್ಟ ಸಂಸಾರ ದೊಂದಿಗೆ ಜೀವನ ನಡೆಸುವ ಆಸೆಯನ್ನ ಪ್ರತಿಯೊಬ್ಬರು ಕಾಣುತ್ತಾರೆ.

    ಅದರಂತೆ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ರಾಮನ ಪಾಳ್ಯದ ಕೆಂಪೇಗೌಡ ಎನ್ನುವ ಯುವಕನೊಬ್ಬ ತುಮಕೂರಿನ ಮಹೇಂದ್ರ ಕಾರ್ ಶೋರೂಮ್ ಗೆ  ಕಾರು ತೆಗೆದುಕೊಳ್ಳಲು ಬರುತ್ತಾನೆ ಆದರೆ ಯುವಕನ ವೇಷಭೂಷಣ ನೋಡಿ   ಶೋರೂಂನಲ್ಲಿ ಕೆಲಸ ಮಾಡುವ ಸೇಲ್ಸ್ ಏಜೆಂಟ್ ಒಬ್ಬನು ಗ್ರಾಹಕರಾದ ಕೆಂಪೇಗೌಡನಿಗೆ ಹತ್ತು ರೂಪಾಯಿ ದುಡ್ಡು ಕೊಡುವ ಯೋಗ್ಯತೆ ಇಲ್ಲ ಕಾರು ತೆಗೆದುಕೊಳ್ಳಲು ಬಂದಿದೆಯೆಂದು ಗುರುವಾರ ಸಂಜೆ  6ಗಂಟೆ  ವೇಳೆಯಲಿ ಅವಮಾನಿಸುತ್ತಾನೆ  .


    Provided by
    Provided by

    ಅರೆರೆ ………ಇದೇನಿದು ……ಈ ಸುದ್ದಿ ದಿಗ್ಗಜರು ಚಿತ್ರದ ಹಾಗೆ ಇದೆಯಲ್ಲ ಎಂದು ಅಂದುಕೊಳ್ಳಬೇಡಿ ಈ ಘಟನೆ ತುಮಕೂರಿನಲ್ಲಿ ವರದಿಯಾಗಿದೆ .

    ಇನ್ನು ಕಾರ್ ಶೋರೂಮ್ ನ ಸೇಲ್ಸ್ ಏಜೆಂಟ್ ಒಬ್ಬ ಅವಮಾನಿಸಿದ ಅದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಹಾಗೂ ಆತನ ಸ್ನೇಹಿತರು ಒಂದು ಗಂಟೆಯಲ್ಲಿ ದುಡ್ಡು ತರುವೆ ಕಾರನ್ನು  ನೀಡುವೆಯಾ ಎಂದು ಕಡ್ಡಿ ಮುರಿದ ಹಾಗೆ ಕೇಳುತ್ತಾರೆ ಇದಕ್ಕೆ ಒಪ್ಪಿದ ಶೋರೂಮ್ ಕೆಲಸಗಾರನ ಮೊದಲು ದುಡ್ಡು ತನ್ನಿ ಇಂದೆ ಕಾರು ನೀಡುವೆ ಎಂದು ಮಾತು ನೀಡುತ್ತಾನೆ ಇದನ್ನೇ ಚಾಲೆಂಜ್ ಆಗಿ ಸ್ವೀಕರಿಸಿದ ಕೆಂಪೇಗೌಡ ಒಂದು ಗಂಟೆಯಲ್ಲಿ ಹತ್ತು ಲಕ್ಷ ರೂಪಾಯಿ ದುಡ್ಡು ಹೊಂದಿಸಿಕೊಂಡು 7:00 ವೇಳೆಯಲ್ಲಿ ಬರುತ್ತಾನೆ.

    ನಂತರ ಗ್ರಾಹಕ ಕೆಂಪೇಗೌಡ ಕಾರು ನೀಡುವಂತೆ ಪಟ್ಟು ಹಿಡಿಯುತ್ತಾನೆ ಆದರೆ ಇಲ್ಲಸಲ್ಲದ ಸಬೂಬುಗಳನ್ನು ಶೋರೂಮ್ ಕೆಲಸಗಾರರು ಹೇಳಿ ಮುಂದಿನ ಎರಡು ಮೂರು ದಿನದಲ್ಲಿ ಕಾರು ನೀಡುತ್ತೇವೆ ಎಂದು  ಹೇಳುತ್ತಾರೆ ಆದರೆ ತಮ್ಮನ ಅವಮಾನಿಸುವ ಮುಂಚೆ ಇದರ ಅರಿವು ತಮಗೆ ಇರಬೇಕಾಗಿತ್ತು ಆದರೆ ನಾನು ಒಂದು ಗಂಟೆಯಲ್ಲಿ 10 ಲಕ್ಷ ರೂಪಾಯಿಗಳನ್ನು ತಂದಿದ್ದೇನೆ ನನಗೆ ಈಗ ಕಾರು ಕೊಡಿ ಎಂದು ಗ್ರಾಹಕ ಕೆಂಪೇಗೌಡ ಹಾಗೂ ಸ್ನೇಹಿತರು ಶೋರೂಂನಲ್ಲಿ ಶುಕ್ರವಾರ ರಾತ್ರಿ ಶೋರೂಮ್ ನವರೊಂದಿಗೆ ವಾಗ್ವಾದ ನಡೆಸುತ್ತಾರೆ ಆದರೆ ಇಲ್ಲಸಲ್ಲದ ಸಬೂಬುಗಳನ್ನು ಹೇಳುತ್ತಾ ಶೋರೂಮ್ ನವರು ಕಾರು ನೀಡಲು ನಿರಾಕರಿಸುತ್ತಾರೆ.

    ಆದರೆ ಪಟ್ಟು ಬಿಡದ ಗ್ರಾಹಕ ಹಾಗೂ ಶೋರೂಮ್ ನವರು ಇಬ್ಬರು ಸಹ ಶುಕ್ರವಾರ  ರಾತ್ರಿ 10:30 ರವರೆಗೂ ಚರ್ಚೆ ನಡೆಸುತ್ತಾರೆ ಆದರೆ ಯಾವುದೇ ಒಮ್ಮತದ ನಿರ್ಧಾರಕ್ಕೆ ಬರದ ಕಾರಣ ಕೊನೆಗೆ ಗ್ರಾಹಕ ಹಾಗೂ ಶೋರೂಮ್ ನವರು ಪೊಲೀಸ್ ಠಾಣೆ ಮೆಟ್ಟಿಲು ಎರುವಂತಾಯಿತು.

    ನಂತರ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಗೆ ಇಬ್ಬರನ್ನು ಕರೆದುಕೊಂಡು ಹೋದ ಪೊಲೀಸರು ರಾಜಿಯನ್ನು ಮಾಡಿಸಲು ಮುಂದಾಗುತ್ತಾರೆ ಆದರೆ ಅದು ಕೂಡ ಫಲಪ್ರದವಾಗುವುದಿಲ್ಲ ನಂತರ ಶುಕ್ರವಾರ ಅವಮಾನಿಸಿದ ಸಿಬ್ಬಂದಿಯಿಂದ ಗ್ರಾಹಕನಿಗೆ ತಪ್ಪಾಯಿತು ಎಂದು ಮುಚ್ಚಳಿಕೆ ಬರೆಸುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.

    ಇದೇ ಸಂದರ್ಭದಲ್ಲಿ ಮಾತನಾಡಿದ ಗ್ರಾಹಕ ಕೆಂಪೇಗೌಡ ನಾನು ಒಬ್ಬ ರೈತನ ಮಗನಾಗಿದ್ದು ನನ್ನ ಬಟ್ಟೆ ವೇಷಭೂಷಣ ನೋಡಿ ನನ್ನ ಅವಮಾನಿಸಿದ್ದಾರೆ ಹಾಗಾಗಿ ನಾನು ಅದನ್ನೇ  ಚಾಲೆಂಜ್ ಆಗಿ ಸ್ವೀಕರಿಸಿದ್ದು ದುಡ್ಡು ತಂದ ನಂತರ  ಶೋರೂಮ್ ನವರು ಇಲ್ಲಸಲ್ಲದ ಸಬೂಬುಗಳನ್ನು ಹೇಳಿ ನಮ್ಮನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ನಂಗೆ ಅದ ಅವಮಾನ ಮುಂದಿನ ದಿನದಲ್ಲಿ ಇಂತಹ ಘಟನೆಗಳು  ನಡೆಯಬಾರದು ಇನ್ನಾದರೂ ಗ್ರಾಹಕರೊಂದಿಗೆ  ಒಳ್ಳೆಯ ರೀತಿಯಲ್ಲಿ ಸ್ಪಂದಿಸಿ ಒಳ್ಳೆಯ ನಡತೆಯನ್ನು ರೂಪಿಸಿಕೊಳ್ಳಬೇಕು  ರೈತರು ಅವರ ವೇಷ ಭೂಷಣ ನೋಡಿ ಮಣೆ ಹಾಕುವ ಬದಲು ಮೊದಲು ಒಳ್ಳೆಯ ಮನಸ್ಸಿನಿಂದ ಗ್ರಾಹಕರನ್ನು ನೋಡುವ ದೃಷ್ಟಿಯನ್ನು ಬೆಳೆಸಿಕೊಳ್ಳಬೇಕು ಎಂದು ಗ್ರಾಹಕ ಕೆಂಪೇಗೌಡ ತಿಳಿಸಿದ್ದಾರೆ.

    ಅದೇನೇ ಇರಲಿ ಕಾರು ಕೊಳ್ಳಲು ಬಂದಾ ಗ್ರಾಹಕನಿಗೆ ಗ್ರಾಹಕನ ಬಟ್ಟೆಬರೆ ನೋಡಿ ಅವರನ್ನ ಅವಮಾನಿಸಿದ್ದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಆದರೂ ಗ್ರಾಹಕರನ್ನು ಒಳ್ಳೆಯ ರೀತಿಯಲ್ಲಿ ನಡೆಸಿಕೊಳ್ಳುವ ಮನೋಭಾವವನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕಾಗಿದೆ ಈ ಮೂಲಕ ಗ್ರಾಹಕ ಕೆಂಪೇಗೌಡ ಅವಮಾನಿಸಿದ ಶೋರೂಮ್ ನವರಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ.

    ವರದಿ: ರಾಜೇಶ್ ರಂಗನಾಥ್

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ

    April 5, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.