ಗ್ರಾಮ ಪಂಚಾಯಿತಿ ಚುನಾವಣೆ ತಾಳಕೆರೆ ಪಂಚಾಯಿತಿ ಜೆಡಿಎಸ್ ತೆಕ್ಕೆಗೆ ಬಿದ್ದಿದೆ. ತಾಳಕೆರೆ ಪಂಚಾಯತಿ ನೂತನ ಅಧ್ಯಕ್ಷರಾಗಿ ಸರೋಜಮ್ಮ, ಅವಿರೋಧ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಜ್ಯೋತಿ ಸೋಮಶೇಖರ್ ಆಯ್ಕೆಯಾಗಿದ್ದಾರೆ.
ಎರಡನೇ ಅವಧಿಗಾಗಿ ನಡೆದ ಚುನಾವಣೆಯಲ್ಲಿ 17 ಸದಸ್ಯರನ್ನು ಹೊಂದಿರುವ ಪಂಚಾಯತಿ ಇದಾಗಿದ್ದು. ಅಧ್ಯಕ್ಷರ ಸ್ಥಾನಕ್ಕೆ ಸರೋಜಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಸೋಮಶೇಖರ್ ಮತ್ತು ಲೋಹಿತ್ ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಪ್ರತಿಸ್ಪರ್ಧಿ ಯಾರು ನಾಮ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ. ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಲೋಕೋಪಯೋಗಿ ಇಲಾಖೆಯ ( A E E) ಅಧಿಕಾರಿಯಾದ ಪ್ರಭಾಕರ್ ಅವರು ಸರೋಜಮ್ಮ ಅವರನ್ನು ಅಧ್ಯಕ್ಷ ಎಂದು ಘೋಷಿಸಿದರು.
ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದು, ಚುನಾವಣೆ ನಡೆದು 17 ಸದಸ್ಯ ರನ್ನು ಹೊಂದಿರುವ ಗ್ರಾಮ ಪಂಚಾಯಿತಿಯ ಸದಸ್ಯರಲ್ಲಿ ಒಂಬತ್ತು ಮತಗಳು ಜ್ಯೋತಿ ಸೋಮಶೇಖರ್ ಎಂಬುವರಿಗೆ , ಲೋಹಿತ್ ಅವರಿಗೆ ಏಳು ಮತಗಳಿದ್ದು ಒಬ್ಬ ಸದಸ್ಯ ಗೈರಾದ ಹಿನ್ನೆಲೆಯಲ್ಲಿ ಒಂಬತ್ತು ಮತಗಳನ್ನು ಪಡೆದ ಜ್ಯೋತಿ ಸೋಮಶೇಖರ್ ಅವರು ಉಪಾಧ್ಯಕ್ಷರಾಗಿ ಸ್ಥಾನ ಅಲಂಕರಿಸಿದ್ದರು ,
ನಂತರ ನೂತನ ಅಧ್ಯಕ್ಷರಿಗೆ ತಾಳಕೆರೆ ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯಿತಿಯ ಸಿಬ್ಬಂದಿ ಶುಭಾಶಯಗಳು ಕೋರಿದರು.
ಇದೆ ವೇಳೆ ನೂತನ ಅಧ್ಯಕ್ಷ ಸರೋಜಮ್ಮ ಉಪಾಧ್ಯಕ್ಷೆ ಜ್ಯೋತಿ ಸೋಮಶೇಖರ್, ಅಭಿಮಾನಿಗಳಿಂದ ಪಟಾಕಿ ಸಿಡಿಸಿ ಸಿಹಿ ಹಂಚಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ವಿನಯ್ ಸಿ ಆರ್,ಪಂಚಾಯತಿ ಸಿಬ್ಬಂದಿಗಳು, ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಜೆಡಿಎಸ್ ಮುಖಂಡರು,ನೂತನ ಅಧ್ಯಕ್ಷರಿಗೆ ಅಭಿನಂದನೆ ಕೋರಿದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA