nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026
    Facebook Twitter Instagram
    ಟ್ರೆಂಡಿಂಗ್
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ
    ಕೊರಟಗೆರೆ August 13, 2025

    ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ

    By adminAugust 13, 2025No Comments2 Mins Read
    koratagere

    ಕೊರಟಗೆರೆ: ತಾಲ್ಲೂಕಿನ ಮಾವತ್ತೂರು ಗ್ರಾಮ ಪಂಚಾಯತಿ ಕೊರಟಗೆರೆ ತಾಲೂಕಿನಲ್ಲಿಯೇ ಗ್ರಾಮಗಳ ಸರ್ವಾಂಗೀಣ ಅಭಿವೃದ್ದಿ ಕಾರ್ಯಗಳಲ್ಲಿ ಉತ್ತಮ ಪಂಚಾಯಿತಿ ಎಂದು ರಾಜ್ಯ ಮಟ್ಟದ ಪ್ರಶಸ್ತಿ ಬಂದಿದ್ದು ಕೆಲವರ ಸುಳ್ಳು ಹೇಳಿಕೆಗಳು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ ವ್ಯಕ್ತಪಡಿಸಿದರು.

    ಮಾವತ್ತೂರು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಂಚಾಯಿತಿ ಅಧ್ಯಕ್ಷೆ ಮತ್ತು ಹುರುಳುಗೆರೆ ಕ್ಷೇತ್ರದ ಸದಸ್ಯೆಯಾಗಿದ್ದು ಹುರುಳುಗೆರೆ ಗ್ರಾಮದ ಶಾಲೆಗೆ ಕಾಂಪೌಂಡ್, ಶೌಚಾಲಯ, ಸಿಸಿ ರಸ್ತೆ ಹಾಗೂ ಚರಂಡಿಗಳ ಅಭಿವೃದ್ದಿ ಕಾಮಗಾರಿಗಳನ್ನು ಮಾಡಲಾಗಿದೆ, ಆದರೆ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಹೊಲದಲ್ಲಿ ಮನೆ ಕಟ್ಟಿಕೊಂಡಿರುವ 12 ಮನೆಗಳ ಜನರು ಓಡಾಡಲು ಖಾಸಗಿ ಜಮೀನಿನಲ್ಲಿ ರಸ್ತೆ ಹಾದು ಹೋಗುವುದರಿಂದ ಹಲವಾರು ವರ್ಷಗಳಿಂದ ರಸ್ತೆ ಸಮಸ್ಯೆ ಇದೆ, ಈಗ ಆ ಸಮಸ್ಯೆಯನ್ನು ಜಮೀನು ಮಾಲೀಕರು ಮತ್ತು ಜನರು ಬಗೆಹರಿಕೊಂಡಿದ್ದು ರಸ್ತೆ ಮಾಡಿಕೊಡಲು ಪಂಚಾಯಿತಿಯು ಬದ್ದವಾಗಿದೆ, ಅದರೆ ಕೆಲವರು ವಿನಾಕಾರಣ ಯಾವ ಅಭಿವೃದ್ದಿಯೂ ಆಗಿಲ್ಲ ಎನ್ನುವ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.


    Provided by
    Provided by

    ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಟಿ. ಮಂಜುನಾಥ್ ಮಾತನಾಡಿ, ಮಾವತ್ತೂರು ಗ್ರಾಮ ಪಂಚಾಯಿತಿಗೆ ಕ್ಷೇತ್ರದ ಶಾಸಕರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ರವರು ಹಲವಾರು ಅನುದಾನಗಳನ್ನು ನೀಡಿದ್ದಾರೆ, ಪಂಚಾಯಿತಿ ವ್ಯಾಪ್ತಿಯ ಸಿಂಗಲೀಪುರದಿಂದ ಹುರುಳುಗೆರೆ ಹೋಗುವ ರಸ್ತೆಗೆ ಶಾಸಕರು 1.10 ಕೋಟಿ ರೂಗಳ ವಿಶೇಷ ಅನುದಾನವನ್ನು ನೀಡಿದ್ದಾರೆ, ಹುರುಳುಗೆರೆಯ ಜಮೀನಿಲ್ಲಿ ಕಟ್ಟಿಕೊಂಡಿರುವ 12 ಮನೆಗಳ ರಸ್ತೆ ಸಮಸ್ಯೆಯನ್ನು ಅವರೆ ಬಗೆ ಹರಿಸಿಕೊಂಡಿದ್ದು ಆ ಜಾಗವನ್ನು ರಸ್ತೆ ಮಾಡಿಕೊಡುವ ಕೆಲಸವನ್ನು ಪಂಚಾಯಿತಿ ಮಾಡುತ್ತದೆ, ಪ್ರತಿ ವರ್ಷದ ಆಕ್ಷನ್‌ ಪ್ಲಾನ್ ನಲ್ಲಿ ಹುರುಳುಗೆರೆ ಗ್ರಾಮದ ಅಭಿವೃದ್ದಿಗೆ ಮಾನ್ಯತೆ ಅನುದಾನ ಪಂಚಾಯಿತಿ ನೀಡುತ್ತಿದ್ದೆ ಅದರೆ ಅಧ್ಯಕ್ಷರ ಕ್ಷೇತ್ರವಾದ ಆ ಗ್ರಾಮದಲ್ಲಿ ವಯಕ್ತಿಕ ಕಾರಣಗಳನ್ನು ಇಟ್ಟುಕೊಂಡು ಗ್ರಾಮಕ್ಕೆ ಯಾವುದೇ ಅನುದಾನ ನೀಡಿಲ್ಲ ಎನ್ನು ಸುಳ್ಳು ಹೇಳಿಕೆ ಸಮಂಜಸವಲ್ಲ ಎಂದರು.

    ಉಪಾಧ್ಯಕ್ಷ ನವೀನ್‌ ಕುಮಾರ್ ಮಾತನಾಡಿ, ನಮ್ಮ ಪಂಚಾಯಿತಿಯಲ್ಲಿ ಸಮಾರು 3500 ಮೀಟರ್‌ ಗಳಷ್ಟು ಹೊಸದಾಗಿ ಚರಂಡಿ ಕಾಮಗಾರಿಗಳನ್ನು ಮಾಡಲಾಗಿದೆ, 500 ಮೀಟರ್ ಗಳಷ್ಟು ಸಿ ಸಿ ರಸ್ತೆ ಮಾಡಲಾಗಿದೆ, ಇದರೊಂದಿಗೆ ಶಾಲಾ ಕಾಲೇಜುಗಳ ಕಾಮಗಾರಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸದಕ್ಕಾಗಿ ನಮಗೆ ಸರ್ಕಾರದಿಂದ ಎನ್.ಆರ್.ಯಿ.ಜಿ ಅಡಿಯಲ್ಲಿ 2025—26  ಸಾಲಿನ ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ ಲಭಿಸಿದೆ, ಪಂಚಾಯಿತಿಯಲ್ಲಿ ಕೆಲಸವೇ ಆಗಿಲ್ಲ ಶಾಸಕರು ಅನುದಾನ ನೀಡಿಲ್ಲ ಎಂಬುವ ಸುಳ್ಳು ಹೇಳಿಕೆಗಳು ಒಳ್ಳೆಯ ಬೆಳವಣಿಗೆಗಳು ಅಲ್ಲ ಎಂದರು.  ಪತ್ರಿಕಾಗೋಷ್ಠಿಯಲ್ಲಿ ಕುಮಾರ್, ಮಹಾಲಿಂಗಯ್ಯ ಸೇರಿದಂತೆ ಕೆಲ ಸದಸ್ಯರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ತುಮಕೂರಿನ ಜನ ಶಿಕ್ಷಣ ಸಂಸ್ಥೆಯಿಂದ ಜೂನ್ 2ರಿಂದ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.