ಬೀದರ್: ಔರಾದ ತಾಲೂಕಿನ ಕೌಠ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ಕುಮಾರ ಕುಲಕರ್ಣಿ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಕೌಠ (ಬಿ) ಗ್ರಾಮ ಪಂಚಾಯತ್ ಅಧ್ಯಕ್ಷ ರವಿನಾ ಗೌತಮ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ.
ಪಿಡಿಒ ಅವರು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವ ವಸತಿ ಯೋಜನೆಯ ಸುಮಾರು 84 ಮನೆಗಳು ಹಾಗೂ PMAY ಆವಾಸ ಯೋಜನೆಯ 83 ಮನೆಗಳು ಮಂಜೂರಾದರು ಇಲ್ಲಿಯವರೆಗೆ ಗ್ರಾಮ ಸಭೆ ಕರೆಯದೆ ವಿಳಂಬ ನೀತಿ ಅನುಸರಿಸುದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಮನೆಗಳ GPS ಮಾಡಿ ಹಣ ಬಿಡುಗಡೆ ಮಾಡಲು 4,000/ದಿಂದ 5000/-ಗಳನ್ನು ಫಲಾನುಭವಿಗಳಲ್ಲಿ ಬೇಡಿಕೆ ಇಡುತ್ತಿದ್ದಾರೆ. ಕೆಲವು ಖಾಲಿ ಚಕ್ ತಂದು ಅದರ ಮೇಲೆ ಸಹಿ ಮಾಡುವಂತೆ ಹೇಳುತ್ತಿದ್ದಾರೆ ಅವರ ಬಗ್ಗೆ ಪ್ರಶ್ನಿಸಿದರೆ ನಿಮಗೆ ತಿಳಿಯುವುದಿಲ್ಲ ಸಹಿ ಮಾಡಿ ಎಂದು ಹೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಪ್ರತಿ ದಿನ ಪಂಚಾಯಿತಿಗೆ ಬರದಿರುವುದರಿಂದ ಸಾರ್ವಜನಿಕರ ಸಮಸ್ಯೆಗಳು ಹಾಗೇ ಉಳಿಯುತ್ತಿವೆ. ಇದರಿಂದ ಪಂಚಾಯತಿನ ಅಭಿವೃದ್ಧಿ ಕುಂಠಿತಗೊಂಡಿದೆ. ಇವರ ಬಗ್ಗೆ ವಿಚಾರಿಸಿದಾಗ ಹಾರಿಕೆಯ ಉತ್ತರ ಕೊಡುತ್ತಿದ್ದಾರೆ ಎಂದು ರವಿನಾ ಗೌತಮ್ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಆದ್ದರಿಂದ ಪಂಚಾಯತ ಅಭಿವೃದ್ಧಿಯ ದೃಷ್ಟಿಯಿಂದ ಅನಿಲ ಕುಮಾರ ಕುಲಕರ್ಣಿ ಇವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿ ಒಬ್ಬ ದಕ್ಷ ಅಧಿಕಾರಿಯನ್ನು ನೇಮಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅವರು ಮನವಿ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx