ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕಸಬಾ ಹೋಬಳಿ ಮುನಿಯೂರು ಗ್ರಾಮದಲ್ಲಿ ಸ್ವಚ್ಚತೆ ಎಂಬುದು ಬಹಳ ದೂರದ ಮಾತಾಗಿದೆ. ಮೂಲಸೌಕರ್ಯಗಳನ್ನು ಒದಗಿಸುವಲ್ಲಿಯೂ ಇಲ್ಲಿನ ಗ್ರಾಮ ಪಂಚಾಯಿತಿ ವಿಫಲವಾಗಿದೆ.
ಇಲ್ಲಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಸ್ವಚ್ಛತೆ ಪದದ ಅರ್ಥವೇ ಗೊತ್ತಿಲ್ಲದ ಹಾಗೆ ಸಾರ್ವಜನಿಕರ ಜೀವದ ಜೊತೆ ಆಟವಾಡುತ್ತಿದ್ದಾರೆ. ಇನ್ನು ಇದೇ ಗ್ರಾಮದ ತುರುವೇಕೆರೆ ತಾಲೂಕಿನ ಮಾಜಿ ಶಾಸಕ ಎಂ ಡಿ ಲಕ್ಷ್ಮೀನಾರಾಯಣ್ ಅವರು ಕೂಡ ಇದೇ ಗ್ರಾಮದವರಾಗಿದ್ದು,ಸ್ವಚ್ಚತೆ ಕನಸಿನ ಮಾತಾಗಿದೆ.
ಆದರೂ ಮಾಜಿ ಶಾಸಕರ ತವರೂರಲ್ಲೇ ಗ್ರಾಮ ಪಂಚಾಯಿತಿಯಿಂದ ಸ್ವಚ್ಛತೆಗೆ ಗಮನಹರಿಸದ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗೆ ನಾಚಿಕೆಗೇಡಿನ ಸಂಗತಿ. ಈಗಾಗಲೇ ಮುನಿಯೂರಿನ ಗ್ರಾಮಸ್ಥರು ಮೂಲಸೌಕರ್ಯದ ಬಗ್ಗೆ ಅದೆಷ್ಟೋ ಬಾರಿ ಮನವಿ ಸಲ್ಲಿಸಿದರು ಕೂಡ ಸ್ವಚ್ಛತೆಯ ಬಗ್ಗೆ ಕಾಳಜಿ ಇಲ್ಲದೆ ಅಧಿಕಾರದ ಗುಂಗಿನಲ್ಲೇ ಕಾಲ ಕಳೆಯುತ್ತಿದ್ದಾರೆ ಅಧಿಕಾರಿಗಳು, ಮತ್ತು ಜನಪ್ರತಿನಿಧಿಗಳು. ಮುನಿಯೂರು ಗ್ರಾಮದ ಚರಂಡಿಯನ್ನು ನೋಡಿದರೆ ಖಂಡಿತ ಈ ಗ್ರಾಮದಲ್ಲಿ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ.
ಒಟ್ಟಾರೆ ಈ ಗ್ರಾಮದಲ್ಲಿ ಯಾವುದೇ ವ್ಯಕ್ತಿಗಳಾಗಲಿ ಪುಟ್ಟ ಮಕ್ಕಳಾಗಲಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದರೆ, ಅದಕ್ಕೆ ಮುಖ್ಯ ಕಾರಣ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ಜನಪ್ರತಿನಿಧಿಗಳು ಇವರೇ ನೇರ ಹೊಣೆ ಹೊರಬೇಕಾಗುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA