ಪಾವಗಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, B.C. ಟ್ರಸ್ಟ್ ಪಾವಗಡ ಯೋಜನಾ ಕಚೇರಿ ವ್ಯಾಪ್ತಿಯ ಸಿ.ಕೆ.ಪುರ ಕಾರ್ಯಕ್ಷೇತ್ರದಲ್ಲಿ ಇಂದು ಗ್ರಾಮ ದೇವತೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಗುರುವಾರ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.
C.K.ಪುರ ವಲಯದ ಮೇಲ್ವಿಚಾರಕರಾದ ಮನು B.R. ಅವರ ನೇತೃತ್ವದಲ್ಲಿ ಹಾಗೂ ಸ್ವ– ಸಹಾಯ ಸಂಘಗಳು ಹಾಗೂ ಪ್ರಗತಿ ಬಂಧು ಸಂಘಗಳ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 2018ರಿಂದ ಸತತವಾಗಿ ಕರ್ನಾಟಕದದ್ಯಂತ ಎಲ್ಲಾ ಕಾರ್ಯಕ್ಷೇತ್ರಗಳಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಮಾಡಲಾಗುತ್ತಿದೆ. ಅದರ ಅಂಗವಾಗಿ ಸಿ.ಕೆ.ಪುರದಲ್ಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಸ್ವಸಹಾಯ ಸಂಘದ ಸದಸ್ಯರಾದ ಉಮಾದೇವಿ, ಜ್ಯೋತಿ ನಾಗಮ್ಮ, ಗಿರಿಜಮ್ಮ, ಸುವರ್ಣಮ್ಮ, ಲಕ್ಷ್ಮೀದೇವಿ, ಶಿವಮ್ಮ, ಓಬಳಮ್ಮ ಮತ್ತಿತರರು ಭಾಗವಹಿಸಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy