ಕೊರಟಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ, ತಾಲ್ಲೂಕು ಪಂಚಾಯಿತಿಯ ಅನುಷ್ಠಾನಾಧಿಕಾರಿಗಳ ನೇತೃತ್ವದಲ್ಲಿ, ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತಂಡದೊಂದಿಗೆ, ಎಲ್ಲಾ ಗ್ರಾಮಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಅಗ್ರಹಾರ, ಬುಕ್ಕಾಪಟ್ಟಣ,ಕುರಂಕೋಟೆ, ತೋವಿನಕೆರೆ, ಬೂದಗವಿ ಮತ್ತು ತುಂಬಾಡಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜಿಲ್ಲಾಡಳಿತವು ಆದೇಶಿಸಿರುವ ಕಾರ್ಯಕ್ರಮಗಳ ಪಟ್ಟಿಯಂತೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಿಡಿಪಿಓ ಅಂಬಿಕಾ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ದೀಪ ಹಾಗೂ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕರ ವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್ ಗಳು ಹಾಗೂ ಇತರೆ ಸಿಬ್ಬಂದಿ ಬೃಹತ್ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ: ಮಂಜುಸ್ವಾಮಿ ಎಂ. ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy