ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿ, ಹುಲ್ಲೇಕೆರೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ ಕೇಳಿ ಬಂದಿದೆ.
ಎಂದಿನಂತೆ ಪಂಚಾಯಿತಿಯ ,ಧ್ವಜಸ್ತಂಬದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗಿತ್ತು. ಆದರೆ ರಾಷ್ಟ್ರಧ್ವಜವನ್ನು ತಳಕೆಳಕಾಗಿ ಹಾರಿಸಲಾಗಿತ್ತು. ಇದನ್ನು ಪಂಚಾಯತಿಯ ಸಿಬ್ಬಂದಿ ಯಾರೂ, ಗಮನಿಸಿರಲಿಲ್ಲ ಇದರಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿಯವರ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ.
ಈ ದೃಶ್ಯವನ್ನು ಮಧ್ಯಾಹ್ನ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಗ್ರಾಮಸ್ಥರು ಗಮನಿಸಿದ್ದರಿಂದಾಗಿ ಅಚಾತುರ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ ರವನ ವಿಚಾರಿಸಿದಾಗ, ಸಾಮಾಜಿಕ ಕಾರ್ಯಕರ್ತರಿಗೆ ಉಡಾಫೆಯ ಉತ್ತರವನ್ನು ನೀಡಿದ್ದಾರೆ. ಇಂತಹ ಅಧಿಕಾರಿಯನ್ನು ಅಮಾನತ್ತು ಮಾಡಬೇಕೆಂದು ಸಾರ್ವಜನಿಕರು ಮಾಹಿತಿ ಹಕ್ಕು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಚಾರವನ್ನು ತುರುವೇಕೆರೆಯ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್ ಗಮನಕ್ಕೆ ತಂದು ಇಂತಹ ಬೇಜವಾಬ್ದಾರಿ ,ಅಧಿಕಾರಿಯನ್ನ ಈ ತಕ್ಷಣವೇ ಅಮಾನತ್ತು ಮಾಡಬೇಕೆಂದು ಮನವಿಮಾಡಿದ್ದಾರೆ.
ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ರವರು ಈ ಕೂಡಲೇ ಸಂಬಂಧಪಟ್ಟ ಅಭಿವೃದ್ಧಿ ಅಧಿಕಾರಿಗೆ ನೋಟಿಸ್ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಇಂತಹ ಬೇಜವಾಬ್ದಾರಿಯುತ ಅಧಿಕಾರಿಗಳ ಮೇಲೆ ತಾಲೂಕು ಆಡಳಿತ ಹಾಗೂ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಂಡು ಇವರನ್ನು ಅಮಾನತು ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ: ಸುರೇಶ್ ಬಾಬು , ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz