ನವದೆಹಲಿ : ಕರ್ನಾಟಕದ ಗ್ರಾಮೀಣ ಅಭಿವೃದ್ಧಿಗಾಗಿ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಇಲಾಖೆಯು 628 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಕೇಂದ್ರ ಹಣಕಾಸು ಇಲಾಖೆಯು ದೇಶದ ವಿವಿಧ ರಾಜ್ಯಗಳಿಗೆ ಒಟ್ಟು 4,190 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕಕ್ಕೆ 628 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. 15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಈ ಅನುದಾನ ಬಿಡುಗಡೆ ಮಾಡಲಾಗಿದೆ.
ಈ ಹಣದಲ್ಲಿ ಗ್ರಾಮೀಣಾ ಪ್ರದೇಶಗಳ ಸ್ವಚ್ಛತೆ, ಬಯಲು ಶೌಚಾಲಯ ಮುಕ್ತ ಯೋಜನೆಗಳ ಅನುಷ್ಠಾನಕ್ಕೆ ಬಳಸಬೇಕು. ಕುಡಿಯುವ ನೀರು, ಮಳೆ ನೀರು ಕೊಯ್ಲು ಮತ್ತು ನೀರು ಮರುಬಳಕೆಯ ಸೌಕರ್ಯ ಕಲ್ಪಿಸಬೇಕು ಎಂದು ಸೂಚನೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy