ಬೆಳಗಾವಿ ಜಿಲ್ಲೆಯ ರಾಯಬಾಗ (Raibag) ತಾಲೂಕಿನ ಮೇಖಳಿ ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಎಂಬಾಕೆ ಕಮಿಷನ್ ಕಿರುಕುಳಕ್ಕೆ ಬೇಸತ್ತು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ
ಗ್ರಾಮದ ಅಭಿವೃದ್ಧಿ ಕೆಲಸಗಳಿಗಾಗಿ ಕಾಮಗಾರಿ ಅನುಮೋದನೆಗೆ ಪಂಚಾಯಿತಿ ಅಧಿಕಾರಿಗಳಿಂದ ಶೇ. 30 ಕಮಿಷನ್ ಬೇಡಿಕೆ ಇದೆ. ಆದರೆ, ಕಮಿಷನ್ ನೀಡಲು ನನ್ನ ಕೈಯಿಂದ ಸಾಧ್ಯವಾಗದೇ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುಧಾ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಪಂಚಾಯತಿಯ 14 ಮತ್ತು 15ನೇ ಹಣಕಾಸು, ಉದ್ಯೋಗ ಖಾತ್ರಿ ಯೋಜನೆ ಅನುದಾನ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆಗೆ ಕಮಿಷನ್ ಬೇಡಿಕೆ ಇಡುತ್ತಿದ್ದಾರೆ. ಕ್ರಿಯಾಯೋಜನೆ ಅನುಮೋದನೆಗಾಗಿಯು ಮುಂಚಿತವಾಗಿ ಶೇ. 3 ರಷ್ಟು ಹಣವನ್ನು ನೀಡಬೇಕಿದೆ. ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಮುಗಂಡ ಹಣ ನೀಡಲು ಪಿಡಿಓ ಮಂಜುನಾಥ್ ದಳವಾಯಿ ಅವರು ಕಮಿಷನ್ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


