nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ವಿದ್ಯುದ್ದೀಕರಣ ಯೋಜನೆ ಅನುಷ್ಠಾನದಲ್ಲಿ ಗಂಭೀರ ಲೋಪಗಳ ಕುರಿತು ಸಿಎಜಿ ವರದಿಯಲ್ಲಿ ಉಲ್ಲೇಖ
    ರಾಜ್ಯ ಸುದ್ದಿ October 6, 2022

    ಗ್ರಾಮೀಣ ವಿದ್ಯುದ್ದೀಕರಣ ಯೋಜನೆ ಅನುಷ್ಠಾನದಲ್ಲಿ ಗಂಭೀರ ಲೋಪಗಳ ಕುರಿತು ಸಿಎಜಿ ವರದಿಯಲ್ಲಿ ಉಲ್ಲೇಖ

    By adminOctober 6, 2022No Comments2 Mins Read
    vedutha

    ಭಾರತದ ನಿಯಂತ್ರಕರು ಮತ್ತು ಮಹಾಲೇಖಪಾಲರ (ಸಿಎಜಿ) ವರದಿ, ಕೇಂದ್ರ ಸರ್ಕಾರದ ದೀನದಯಾಳ್ ಉಪಾಧ್ಯಾಯ ಗ್ರಾಮ ಜಯೋತಿ ಯೋಜನೆ (ಡಿಡಿಯುಜಿಜೆವೈ) ಹಾಗೂ ಪ್ರಧಾನ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ (ಸೌಭಾಗ್ಯ) ಯೋಜನೆಗಳಡಿ ಕರ್ನಾಟಕದಲ್ಲಿ ಐದು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ (ಎಸ್ಕಾಂಗಳು), ಗುತ್ತಿಗೆಗಳ ಮಂಜೂರಾತಿ ಹಾಗೂ ನಿಧಿ ನಿರ್ವಹಣೆಯಡಿ ಉಂಟಾಗಿರುವ ಕೊರತೆಗಳು ಮತ್ತು ಲೋಪಗಳನ್ನು ಉಲ್ಲೇಖಿಸಿದೆ.

    ರಾಜ್ಯದಲ್ಲಿ ವಿದ್ಯುತ್ ಸಂಪರ್ಕವಿಲ್ಲದ 39 ಗ್ರಾಮಗಳು, ಭಾಗಶಃ ವಿದ್ಯುತ್ ಸಂಪರ್ಕವಿರುವ ೧೩,೯೪೯ ಗ್ರಾಮಗಳು ಹಾಗೂ ೫,೭೦,೯೨೨ ಬಿಪಿಎಲ್ ಕುಟುಂಬಗಳಿಗೆ ಈ ಯೋಜನೆಗಳಡಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದರೂ ಸಹ, ಯೋಜನೆಯಡಿ ಉಂಟಾಗಿರುವ ಲೋಪಗಳು ಹಾಗೂ ಅದರಿಂದ ಆಗಿರುವ ಸಮಯ ಮತ್ತು ಹಣದ ನಷ್ಟದ ಕುರಿತು ನಿಗಾವಹಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಎಸ್ಕಾಂಗಳ ವೈಫಲ್ಯದ ಕುರಿತು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಸಿಎಜಿ ಆಡಿಟ್ ಅಡಿ ಪರಿಗಣಿಸಲಾಗಿದ್ದಂತಹ ಐದು ಎಸ್ಕಾಂಗಳ ಪೈಕಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್), ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ), ಹಾಗೂ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ)ಗಳು ಸೇರಿವೆ.

    ಗುತ್ತಿಗೆ ಅನುಮೋದನೆ ಮಾಡುವಲ್ಲಿ ಉಂಟಾಗಿರುವ ಪ್ರಮುಖ ಲೋಪಗಳ ಕುರಿತು ಉಲ್ಲೇಖಿಸಿರುವ ವರದಿಯು, ಎಲ್ಲಾ ಐದು ಎಸ್ಕಾಂಗಳು, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ಕಾಯ್ದೆ (ಕೆಟಿಪಿಪಿ), ಕಲಂ ೪ಜಿ ಅಡಿ ವಿನಾಯಿತಿಯನ್ನು ಪಡೆದು, ಟೆಂಡರ್‌ ಗಳನ್ನು ಆಹ್ವಾನಿಸದೆಯೇ ಯೋಜನೆ ನಿರ್ವಹಣಾ ಏಜೆನ್ಸಿಯನ್ನು (ಪಿಎಂಎ) ನೇಮಕಾ ಮಾಡಿದೆ ಎಂದು ತಿಳಿಸಿದೆ. ಜೊತೆಗೆ, ಈ ಯೋಜನೆಯಡಿ ನೀಡಿದ್ದಂತಹ ಮಿತಿಗಿಂತಲೂ ಹೆಚ್ಚಿನ ದರದಲ್ಲಿ ಪಿಎಂಎ ನೇಮಕಾತಿಯ ಕುರಿತೂ ಉಲ್ಲೇಖಿಸಿದೆ.

    ಗುತ್ತಿಗೆ ಮಂಜೂರಾತಿಗೆ ಸಂಬಂಧಪಟ್ಟಂತೆ ಬಿಡ್ಡರ್ ಅನ್ನು ಆಯ್ಕೆ ಮಾಡುವಲ್ಲಿ ಲೋಪಗಳಾಗಿವೆ ಹಾಗೂ ಮೌಲ್ಯಮಾಪನಕ್ಕಾಗಿ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ಸಲ್ಲಿಸುವಲ್ಲಿ ವಿಫಲವಾಗಿದ್ದಂತಹ ಪ್ರತಿಕ್ರಿಯಸದ ಬಿಡ್ಡರ್‌ ಗಳನ್ನೂ ಸಹ ಪರಿಗಣಿಸಲಾಗಿರುವ ಅಂಶಗಳು ಬಹಿರಂಗಗೊಂಡಿವೆ. “ಬಿಡ್ ಷರತ್ತುಗಳ ಪ್ರಕಾರ ಅಗತ್ಯವಿದ್ದಂತಹ ಅಂಶಗಳನ್ನು ಪೂರೈಸದೇ ಇರುವಂತಹ ಬಿಡ್ಡರ್‌ ಗಳನ್ನು ಪರಿಗಣಿಸಿರುವ ಕುರಿತು ಯಾವುದೇ ಸ್ಪಷ್ಟನೆಗಳಿಲ್ಲ. ಮೇಲಾಗಿ, ಸ್ಪಂದಿಸದ ಬಿಡ್ಡರುಗಳಿಗೆ ಗುತ್ತಿಗೆ ನೀಡಿರುವುದು ಕೆಟಿಪಿಪಿ ನಿಯಮಗಳ ಉಲ್ಲಂಘನೆಯಾಗಿದೆ,” ಎಂದು ಆಡಿಟ್ ವರದಿಯಲ್ಲಿ ತಿಳಿಸಲಾಗಿದೆ.

    ವರದಿಯ ಪ್ರಕಾರ, ಎಸ್ಕಾಂಗಳು ನಿಗಧಿತ ಅವಧಿಗಿಂತಲೂ ೧೨ ರಿಂದ ೩೭ ತಿಂಗಳು ಹೆಚ್ಚು ಸಮಯ ತೆಗೆದುಕೊಂಡಿದ್ದು, ಈ ಯೋಜನೆಯ ಫಲಾನುಭವಿಗಳನ್ನು ಮುಂದೂಡಿರುವುದು ಕಂಡು ಬಂದಿದೆ. ಇದಕ್ಕೆ ನೀಡಿರುವ ಪ್ರಮುಖ ಕಾರಣವೇನೆಂದರೆ ಗುತ್ತಿಗೆ ಮಂಜೂರಾತಿಯಲ್ಲಿ ವಿಳಂಬ ಹಾಗೂ ಕಾಮಗಾರಿ ಆರಂಭಿಸುವಲ್ಲಿ ಆಗಿರುವ ವಿಳಂಬ ಎಂದು ನೀಡಲಾಗಿದೆ. ಕೆಲವು ಪ್ರಕರಣಗಳಲ್ಲಿ, ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅರಣ್ಯ ಮತ್ತು ರೈಲ್ವೆ ಪ್ರಾಧಿಕಾರಗಳಿಂದ ಶಾಸನಬದ್ಧ ತೀರುವಳಿಗಳನ್ನು ಪಡೆಯುವಲ್ಲಿ ವಿಳಂಬವಾಗಿರುವುದನ್ನೂ ಕಾರಣಗಳೆಂದು ನೀಡಲಾಗಿದೆ.

    ಜೊತೆಗೆ, ಎಸ್ಕಾಂಗಳು ವಿವರವಾದ ಯೋಜನಾ ವರದಿಗಳನ್ನು (ಡಿಪಿಆರ್) ತಯಾರಿಸುವಾಗ ಕ್ಷೇತ್ರ ಸಮೀಕ್ಷೆಗಳನ್ನು ನಡೆಸಿಲ್ಲ. ಇದರಿಂದಾಗಿ ಅಗತ್ಯವಿರುವ ಸಾಮಗ್ರಿಗಳ ಪ್ರಮಾಣದಲ್ಲಿ ವ್ಯತ್ಯಾಸವಾಗಿದ್ದು, ವೆಚ್ಚಗಳು ಅನೇಕ ಬಾರಿ ಮರುಹಂಚಿಕೆಯಾಗಿರುವುದು ಬಹಿರಂಗಗೊಂಡಿದೆ.

    ಮಂಜೂರಾಗಿರುವಂತಹ ಒಟ್ಟು ವೆಚ್ಚಕ್ಕಿಂತ ರೂ.೨೨೫.೪೯ ಕೋಟಿ ಹೆಚ್ಚುವರಿ ಹಣಕಾಸಿನ ಹೊರೆ ಉಂಟಾಗಿದ್ದು, ಡಿಡಿಯುಜಿಜೆವೈ ಅಡಿ ಯಾವುದೇ ಅರ್ಹ ಅನುದಾನ ಇಲ್ಲದಿರುವ ಅಂಶವನ್ನೂ ದಾಖಲಿಸಲಾಗಿದೆ. ರಾಜ್ಯ ಸರ್ಕಾರ ಹಾಗೂ ಎಸ್ಕಾಂಗಳು ಯೋಜನೆಯ ಪ್ರಗತಿಯನ್ನು ಕಾಲಕಾಲಕ್ಕೆ ನಿಗಾವಣೆ ಮಾಡುವಲ್ಲಿ ವಿಫಲವಾಗಿರುವ ವಿಷಯವನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಡಿಡಿಯುಜಿಜೆವೈ ಹಾಗೂ ಸೌಭಾಗ್ಯ ಎರಡೂ ಯೋಜನೆಗಳು ಕೇಂದ್ರ ಸರ್ಕಾರದ ಉಪಕ್ರಮಗಳಾಗಿದ್ದು, ದೇಶದ ಪ್ರತಿಯೊಂದು ಗ್ರಾಮದ, ವಿದ್ಯುತ್ ಸಂಪರ್ಕ ಇಲ್ಲದಿರುವಂತಹ ಪ್ರತಿಯೊಂದು ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಉದ್ದೇಶವನ್ನು ಹೊಂದಿದೆ.

    ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.