nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ಕ್ಷೇತ್ರದಲ್ಲಿ ಹಸ್ತಕ್ಷೇಪ: ಬೆಂಕಿ ಜೊತೆ ಸರಸವಾಡುತ್ತಿದ್ದೀರಿ, ಎಚ್ಚರ ಎಂದ ಚನ್ನರಾಜ ಹಟ್ಟಿಹೊಳಿ
    ಜಿಲ್ಲಾ ಸುದ್ದಿ February 19, 2023

    ಗ್ರಾಮೀಣ ಕ್ಷೇತ್ರದಲ್ಲಿ ಹಸ್ತಕ್ಷೇಪ: ಬೆಂಕಿ ಜೊತೆ ಸರಸವಾಡುತ್ತಿದ್ದೀರಿ, ಎಚ್ಚರ ಎಂದ ಚನ್ನರಾಜ ಹಟ್ಟಿಹೊಳಿ

    By adminFebruary 19, 2023No Comments3 Mins Read
    channaraja hattiholi

    Provided by
    Provided by

    ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮಾಡುವ ದಿನ ಪ್ರತಿಭಟನೆ ಮಾಡುವುದಾಗಿ ಹೇಳಿಕೆ ನೀಡಿರುವ ರಮೇಶ ಜಾರಕಿಹೊಳಿಗೆ ಖಡಕ್ ಎಚ್ಚರಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜನರ ಭಾವನೆಗಳ ವಿರುದ್ಧ, ಬೆಂಕಿಯ ಜೊತೆ ಸರಸವಾಡುತ್ತಿದ್ದೀರಿ ಎಚ್ಚರ ಎಂದಿದ್ದಾರೆ.

    ಶನಿವಾರ, ಶಿವರಾತ್ರಿಯ ಸಂದರ್ಭದಲ್ಲಿ ರಾಜಹಂಸಗಡದ ಸಿದ್ದೇಶ್ವರ ದೇವಸ್ಥಾನದಲ್ಲಿ ಚನ್ನರಾಜ ಹಟ್ಟಿಹೊಳಿ ಬೆಳಗ್ಗೆ ಪೂಜೆ ಇಟ್ಟುಕೊಂಡಿದ್ದರು. ಪೂಜೆ ಮುಗಿಸಿ ಹೊರಡುವ ಸಂದರ್ಭದಲ್ಲಿ ರಮೇಶ ಜಾರಕಿಹೊಳಿ ಕಾರು ಎದುರಾಯಿತು. ಚನ್ನರಾಜ ಹಟ್ಟಿಹೊಳಿ ಕಾರಿಗೆ ಮುಂದೆ ಹೋಗದಂತೆ ರಮೇಶ ಜಾರಕಿಹೊಳಿ ಕಾರು ಅಡ್ಡ ಬಂದು ನಿಂತಿತು. ಚನ್ನರಾಜ ಹಟ್ಟಿಹೊಳಿ ತಾಳ್ಮೆಯಿಂದಲೇ ಕೆಲ ಹೊತ್ತು ಕಾದರೂ ರಮೇಶ ಜಾರಕಿಹೊಳಿ ಕಾರಿನ ಚಾಲಕ ದಾರಿ ಬಿಟ್ಟು ಕೊಡಲಿಲ್ಲ. ನಂತರ ಚನ್ನರಾಜ ಹಟ್ಟಿಹೊಳಿ ಅವರು ತಮ್ಮ ಕಾರಿನ ಹಿಂದೆ ನಿಂತ ಕಾರಿನವರಿಗೆ ವಿನಂತಿಸಿ ಹಿಂದೆ ಸರಿಸಿ ತಮ್ಮ ಕಾರನ್ನು ಪಕ್ಕದಿಂದ ತೆಗೆದುಕೊಂಡು ಹೊರಟರು.

    ಈ ಸಂದರ್ಭದಲ್ಲಿ ಅಲ್ಲಿದ್ದ ಜನರು ಚನ್ನರಾಜ ಹಟ್ಟಿಹೊಳಿಗೆ ಜಯವಾಗಲಿ ಎಂದು ಘೋಷಣೆ ಕೂಗತೊಡಗಿದರು. ನೀವು ಮುಂದೆ ಹೋಗಿ, ನಾವು ನಿಮ್ಮೊಂದಿಗಿದ್ದೇವೆ ಎಂದು ಕೂಗಿದರು.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಯಾರ್ರೀ ರಮೇಶ ಜಾರಕಿಹೊಳಿ? ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೂ ಇವರಿಗೂ ಏನು ಸಂಬಂಧ? ನಿಮ್ಮ ಗೋಕಾಕ ಕ್ಷೇತ್ರವನ್ನು ನೀವು ನೋಡಿಕೊಳ್ಳಿ. ಗ್ರಾಮೀಣ ಕ್ಷೇತ್ರದ ಶಾಸಕರು ಸಮರ್ಥರಿದ್ದಾರೆ. ಉತ್ತಮ ಕೆಲಸ ಮಾಡುತ್ತಿದ್ದಾರೆ. ಜನರ ವಿಶ್ವಾಸಗಳಿಸಿದ್ದಾರೆ. ಅವರ ಕ್ಷೇತ್ರವನ್ನು ಅವರು ನೋಡಿಕೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.


    Provided by
    Provided by

    ನೂರು ವರ್ಷದಿಂದ ಬೆಳಗಾವಿ ಗ್ರಾಮೀಣ ಜನರ ಕನಸಿತ್ತು. ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ನಿರ್ಮಾಣವಾಗಬೇಕೆನ್ನುವ ಕನಸು ಇಂದು ಈಡೇರಿದೆ. ರಮೇಶ ಜಾರಕಿಹೊಳಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಏನು ಸಂಬಂಧ? ಗೋಕಾಕ ಕ್ಷೇತ್ರದ ಶಾಸಕರು ಅವರು, ಬೆಳಗಾವಿ ತಾಲೂಕಿಗೆ ಏನು ಸಂಬಂಧ? ಈ ಭಾಗದ ಶಾಸಕರು ಲಕ್ಷ್ಮೀ ಹೆಬ್ಬಾಳಕರ್, ಈ ಭಾಗದ ಬಗ್ಗೆ ವಿಚಾರ ಮಾಡಲು ಅವರಿಗೆ ಸಾಕಷ್ಟು ಜ್ಞಾನವಿದೆ. ನೀವು ಗೋಕಾಕದ್ದು ವಿಚಾರ ಮಾಡಿಕೊಳ್ಳಿ. ಇಲ್ಲಿ ಹಸ್ತಕ್ಷೇಪ ಮಾಡಲು ನಿಮಗೇನೂ ಹಕ್ಕಿಲ್ಲ. ನಿಮ್ಮ ಕ್ಷೇತ್ರದ ಬಗ್ಗೆ ವಿಚಾರ ಮಾಡಿಕೊಳ್ಳಿ ಎಂದು ಚನ್ನರಾಜ ಎಚ್ಚರಿಸಿದರು.

    ಶಿಷ್ಠಾಚಾರ ಎಲ್ಲೂ ಉಲ್ಲಂಘನೆಯಾಗಿಲ್ಲ. ಆಮಂತ್ರಣ ಪತ್ರಿಕೆ ಇನ್ನೂ ಬಂದಿಲ್ಲ. ಜಿಲ್ಲಾಡಳಿತದಿಂದ ಇನ್ನೂ ಆಮಂತ್ರಣ ಪತ್ರಿಕೆಯೇ ಬಂದಿಲ್ಲ. ನಾನು ಇವರ ಹಾಗೆ ಗಾಳಿಯಲ್ಲಿ ಗುಂಡು ಹಾರಿಸುವುದಿಲ್ಲ. ಆಮಂತ್ರಣ ಪತ್ರಿಕೆಯೇ ಬಾರದಿದ್ದಾಗ ಶಿಷ್ಠಾಚಾರ ಉಲ್ಲಂಘನೆ ಎಲ್ಲಿಂದ ಬಂತು? ಇವರು ಇಂತಹ ಮಹತ್ವವಾದ ಕಾರ್ಯಕ್ರಮಕ್ಕೆ ವಿಘ್ನವನ್ನುಂಟು ಮಾಡಲು ಹೊರಟಿದ್ದಾರೆ. ಸಮಸ್ತ ಛತ್ರಪತಿ ಶಿವಾಜಿ ಮಹಾರಾಜರ ಭಕ್ತರ ವಿರುದ್ಧ ರಮೇಶ ಜಾರಕಿಹೊಳಿ ನಡೆಯುತ್ತಿದ್ದಾರೆ ಎಂದು ಹೇಳಿದರು.

    ಹಿಂದಿನ ಎಲ್ಲ ಶಾಸಕರೂ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪಿಸಬೇಕೆಂದು ಕನಸು ಕಂಡಿದ್ದರು. ಪ್ರಯತ್ನವನ್ನೂ ಮಾಡಿದ್ದರು. ಆದರೆ ದೈವೀ ಇಚ್ಛೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಮಾಡಿಸಿದೆ. ಇಲ್ಲಿರುವ ಸಿದ್ದೇಶ್ವರ ಮಹಾರಾಜರ ಆಶಿರ್ವಾದದಿಂದ ಲಕ್ಷ್ಮೀ ಹೆಬ್ಬಾಳಕರ್ ಈ ಕೆಲಸವನ್ನು ಮಾಡಿದ್ದಾರೆ. ಎಲ್ಲರೂ ಪ್ರಯತ್ನ ಮಾಡಿದರೂ ಲಕ್ಷ್ಮೀ ಹೆಬ್ಬಾಳಕರ್ ಕಾಲದಲ್ಲಿ ಅದು ಆಗಿದೆ. ಹೊಟ್ಟೆ ಕಿಚ್ಚಿಗೆ ಮದ್ದಿಲ್ಲ. ಲಕ್ಷ್ಮೀ ಹೆಬ್ಬಾಳಕರ್ ಬೆಳೆಯುತ್ತಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್ ಜನರ ಮನಸ್ಸನ್ನು ಗೆಲ್ಲುತ್ತಿದ್ದಾರೆ ಎನ್ನುವ ಕಾರಣದಿಂದ ರಮೇಶ ಜಾರಕಿಹೊಳಿ ಸಮಸ್ತ ಶಿವಾಜಿ ಭಕ್ತರಿಗೆ ನೋವುಂಟು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

    ಮಾರ್ಚ್ 5ರಂದು ರಮೇಶ ಜಾರಕಿಹೊಳಿ ಪ್ರತಿಭಟನೆ ಮಾಡುತ್ತಾರಂತೆ. ರಮೇಶ ಜಾರಕಿಹೊಳಿ ಅವರೆ ನೀವು ಬೆಂಕಿಯ ಜೊತೆ ಸರಸವಾಡುತ್ತಿದ್ದೀರಿ. ಸಮಸ್ತ ಶಿವಾಜಿ ಮಹಾರಾಜರ ಭಕ್ತರ ಭಾವನೆಯ ಜೊತೆಗೆ ಆಟವಾಡುತ್ತಿದ್ದೀರಿ. ಪ್ರತಿಭಟನೆ ಮಾಡುವುದಾಗಿ ಹಿರೇಬಾಗೇವಾಡಿಯಲ್ಲಿ ಕನ್ನಡದಲ್ಲಿ ಹೇಳಿದ್ದೀರಿ. ಅದು ಮುಗ್ದ ಮರಾಠಿ ಭಾಷಿಕರಿಗೆ ಅರ್ಥವಾಗಿಲ್ಲ. ಅರ್ಥವಾದರೆ ಅವರು ಸುಮ್ಮನಿರುವುದಿಲ್ಲ. ಶಿವಾಜಿ ಭಕ್ತರ ಮನಸ್ಸಿನ ಜೊತೆ ನೀವು ಆಟವಾಡುತ್ತಿದ್ದೀರಿ. ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಹೇಳಿದರು.

    ಸರಕಾರದ ಕಾರ್ಯಕ್ರಮದಲ್ಲಿ ಪ್ರೋಟೋಕಾಲ್ ಉಲ್ಲಂಘನೆ ಮಾಡಲು ನಾವು ಮೂರ್ಖರಲ್ಲ. ನಾವೂ ವಯಕ್ತಿಕವಾಗಿ ಒಂದು ಕೋಟಿ ರೂ. ಖರ್ಚು ಮಾಡಿದ್ದೇವೆ. ಆದರೂ ನಾವೇನೂ ಪ್ರೋಟೋಕಾಲ್ ಉಲ್ಲಂಘನೆ ಮಾಡುತ್ತಿಲ್ಲ.

    ಪ್ರೋಟೋಕಾಲ್ ಬಗ್ಗೆ ಮಾತನಾಡುವ ಇವರು ಗೋಕಾಕದಲ್ಲಿ ಎಷ್ಟು ಬಾರಿ ಪ್ರೋಟೋಕಾಲ್ ಅನುಸರಿಸಿದ್ದೀರಿ? ಎಷ್ಟು ಬಾರಿ ಮುಖ್ಯಮಂತ್ರಿಗಳನ್ನು ಕರೇದಿದ್ದೀರಿ? ಎಷ್ಟು ಬಾರಿ ಇಲಾಖೆ ಮಂತ್ರಿಗಳನ್ನು ಕರೆದಿದ್ದೀರಿ? ನಿಮ್ಮದು ಅಲ್ಲಿ ಪಾಳೇಗಾರಿಕೆ, ನೀವು ನಡೆದಿದ್ದೇ ದಾರಿ. ನೀವು ಹೇಳಿದ್ದೇ ಶಾಸನ. ತಹಸಿಲ್ದಾರ ಕಚೇರಿ ನಿಮ್ಮ ಮನೆಯಲ್ಲಿ, ಸಬ್ ರಜಿಸ್ಟ್ರಾರಿ ಕಚೇರಿ ನಿಮ್ಮ ಮನೆಯಲ್ಲಿ. ಸಿಪಿಐ ನಿಮ್ಮ ಮನೆಗೆ ಬಂದು ಕೂಡ್ರಬೇಕು. ಡಿಎಸ್ಪಿ ಅಂತೂ ಅತ್ತ ಹಾಯುವಂತಿಲ್ಲ. ಸಾಹುಕಾರ್ ಇದಾರಾ ಕೇಳಿ, ಅವರಿದ್ದರೆ ಅತ್ತ ದಿಕ್ಕಿನಲ್ಲೂ ಹಾಯುವಂತಿಲ್ಲ. ಇಷ್ಟೆಲ್ಲ ಪಾಳೆಗಾರಿಕೆ ಮಾಡಿಕೊಂಡು ಬಂದ ನೀವು ಯಾವ ಪ್ರೋಟೋಕಾಲ್ ಬಗ್ಗೆ ಮಾತನಾಡುತ್ತೀರಿ ಎಂದು ಪ್ರಶ್ನಿಸಿದರು.

    ಗೋಕಾಕ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳಕರ್ ಸ್ಪರ್ಧಿಸುತ್ತಾರಾ ಎನ್ನುವ ಪ್ರಶ್ನೆಗೆ, ಅದು ಜನರ ಬಯಕೆ. ಗೋಕಾಕ ಕ್ಷೇತ್ರದ ಜನರು ಕಷ್ಟದಲ್ಲಿದ್ದಾರೆ. ಎಲ್ಲ ಇಲಾಖೆಗಳಿಂದಲೂ ತೊಂದರೆ ಅನುಭವಿಸುತ್ತಿದ್ದಾರೆ. ಜನರ ಬಯಕೆ, ದೈವೀ ಇಚ್ಚೆ ಹೇಗಿರುತ್ತದೆ ನೋಡೋಣ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ತುಮಕೂರು: ಆಧುನಿಕ ಸಮಾಜದಲ್ಲೂ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಗರದ ಕೆಇಬಿ (KEB) ಇಂಜಿನಿಯರ್ಸ್…

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.