nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    • ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    ಪಾವಗಡ September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    By Ganesh TumkuruSeptember 8, 2026No Comments2 Mins Read

    ಪಾವಗಡ : ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಹಾಗೂ ನಿಡಗಲ್ಲು ದುರ್ಗದ ಅಭಿಮಾನಿಗಳ ವತಿಯಿಂದ 10ನೇ ವರ್ಷದ ನಿಡಗಲ್ಲು ಉತ್ಸವ–2026 ಅನ್ನು ನಿಡಗಲ್ಲು ದುರ್ಗದ ರಾಮತೀರ್ಥದ ಬಳಿ ಅದ್ದೂರಿಯಾಗಿ ಆಚರಿಸಲಾಯಿತು.

    ಡೋಲು ಬಾರಿಸುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ಸರ್ಕಾರವೇ ಪ್ರತಿವರ್ಷ ನಿಡಗಲ್ಲು ಉತ್ಸವವನ್ನು ಆಚರಿಸಬೇಕು. ಐತಿಹಾಸಿಕ ನಿಡಗಲ್ಲು ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಮಾತನಾಡಿ, ತಮ್ಮ ಶಾಸಕಾವಧಿಯಲ್ಲಿ ನಿಡಗಲ್ಲು ದುರ್ಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗಿತ್ತು. ಮುಂದಿನ ದಿನಗಳಲ್ಲಿ ವಾಲ್ಮೀಕಿ ಆಶ್ರಮದ ಅಭಿವೃದ್ಧಿಗೆ ಸಂಸದರ ನಿಧಿಯಿಂದಲೂ ಸಹಕಾರ ಕೊಡಿಸುವುದಾಗಿ ಭರವಸೆ ನೀಡಿದರು.

    ತುಮಕೂರು ನಗರಸಭೆ ಮಾಜಿ ಮಹಾಪೌರ ಹಾಗೂ ವಾಲ್ಮೀಕಿ ಬ್ಯಾಂಕ್ ಅಧ್ಯಕ್ಷ ಬಿ.ಜಿ. ಕೃಷ್ಣಪ್ಪ ಮಾತನಾಡಿ, ವಾಲ್ಮೀಕಿ ಆಶ್ರಮದ ಭವನದ ಮುಂದುವರಿದ ಕಾಮಗಾರಿಗೆ ವೈಯಕ್ತಿಕವಾಗಿ ಹಾಗೂ ಬ್ಯಾಂಕ್ ವತಿಯಿಂದ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

    ದಿವ್ಯಸಾನಿಧ್ಯ ವಹಿಸಿದ್ದ ವಾಲ್ಮೀಕಿ ಸಂಜಯಕುಮಾರಾನಂದ ಸ್ವಾಮೀಜಿ ಮಾತನಾಡಿ, ಕಳೆದ 10 ವರ್ಷಗಳಿಂದ ನಿಡಗಲ್ಲುಈ ಉತ್ಸವವನ್ನು ನಿರಂತರವಾಗಿ ಆಚರಿಸಿಕೊಂಡು ಬರುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಸೂಕ್ತ ಗಮನ ಹರಿಸದಿರುವುದು ಬೇಸರದ ಸಂಗತಿ ಎಂದರು.

    ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದಲೇ ನಿಡಗಲ್ಲು ಉತ್ಸವ ಆಚರಿಸಲು ಹಾಗೂ ವಾಲ್ಮೀಕಿ ಆಶ್ರಮದ ಅಭಿವೃದ್ಧಿಗೆ ಶಾಸಕರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಉತ್ಸವಕ್ಕೆ ಶಾಸಕರು ಗೈರಾಗಿರುವುದಕ್ಕೂ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಶ್ರೀ ಲೋಕೇಶ್ ಪಾಳೇಗಾರ್ ವಹಿಸಿದ್ದರು.

     ಪಾಳೇಗಾರರ ಉಪಸ್ಥಿತಿಗೆ ವಿಶೇಷ ಮೆರಗು:

    ವಿವಿಧ ಸಂಸ್ಥಾನಗಳ ಪಾಳೇಗಾರ ವಂಶಸ್ಥರು ಉತ್ಸವದಲ್ಲಿ ಭಾಗವಹಿಸಿದ್ದು ಕಾರ್ಯಕ್ರಮಕ್ಕೆ ವಿಶೇಷ ಮೆರಗು ತಂದಿತು. ಚಿತ್ರದುರ್ಗದ ದೊಡ್ಡ ಮದಕರಿ ನಾಯಕ ವಂಶಸ್ಥರಾದ ರಾಜ ಪ್ರಸನ್ನ ನಾಯಕ, ರಾಜ ಯಲ್ಲಪ್ಪ ನಾಯಕ ಸಂಸ್ಥಾನದ ದೊರೆ ಪಾಳೇಗಾರ ರಾಜ ಜಯಚಂದ್ರ ರಾಜು, ನಾಯಕನಹಟ್ಟಿ ಸಂಸ್ಥಾನದ ಪಾಳೇಗಾರ ರಾಜಾ ರುದ್ರಮುನಿ ಪಾಳೇಗಾರ್, ಕಣ್‌ಕುಪ್ಪೆ ಸಂಸ್ಥಾನದ ಪಾಳೇಗಾರ ರಾಜ ತಿಪ್ಪೇಶ್ ಪಾಳೇಗಾರ್ ಹಾಗೂ ಹೊಸದುರ್ಗ ಸಂಸ್ಥಾನದ ಪಾಳೇಗಾರ ರಾಜ ಶ್ರೀಧರ್ ನಾಯಕ ಉಪಸ್ಥಿತರಿದ್ದರು.

    ನಿಡಗಲ್ಲು ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮದಿಂದ ವಿವಿಧ ಕಲಾತಂಡಗಳೊಂದಿಗೆ ರಾಮತೀರ್ಥದವರೆಗೆ ಮೆರವಣಿಗೆ ನಡೆಯಿತು. ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಉತ್ಸವಕ್ಕೆ ಮತ್ತಷ್ಟು ಕಳೆ ತಂದವು. ವೇದಿಕೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳೂ ಜರುಗಿದವು.

    ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಯಲಾಟ ಅಕಾಡೆಮಿ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಡಿ. ನಾಗರಾಜು ಅವರನ್ನು ಅಭಿನಂದಿಸಲಾಯಿತು.

    ಕಾರ್ಯಕ್ರಮದಲ್ಲಿ. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ತಿಮ್ಮಾರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಲಕ್ಷ್ಮೀನಾರಾಯಣ್, ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪುರುಷೋತ್ತಮ್ ನಾಯಕ, ಜಿಲ್ಲಾ ನಾಯಕ ಸಂಘದ ಪದಾಧಿಕಾರಿಗಳಾದ ಜಯರಾಮ್, ಎನ್. ಅನಿಲ್ ಕುಮಾರ್, ಆರ್‌ಟಿಒ ತಿಪ್ಪೇಸ್ವಾಮಿ, ನಾಗರಾಜ್, ಕೆ.ಆರ್ ನಾಗೇಶ್ ಕೊತ್ತೂರು, ಸೊಗಡು ವೆಂಕಟೇಶ್, ಎನ್.ಎ. ಈರಣ್ಣ, ಪಿಡಿಒ ಚಿಕ್ಕಣ್ಣ, ಡಿಎಸ್‌ಎಸ್‌ನ ಸಿ.ಕೆ. ತಿಪ್ಪೇಸ್ವಾಮಿ, ರಾಜ್ಯ ಸಂಪನ್ಮೂಲ ವ್ಯಕ್ತಿ ನವೀನ್ ಕಿಲಾರ್ಲಹಳ್ಳಿ, ಮುಖಂಡರಾದ ವೆಂಕಟೇಶ್, ಸಮಾಜ ಸೇವಕ ಚೇತನ್ ಬಾಬು, ನರಸಿಂಹ ಕೃಷ್ಣ, ನರಸಿಂಹಮೂರ್ತಿ, ಟಿ.ಪಿ. ನರಸಿಂಹ, ನಿಡಗಲ್ಲಿನ ರಾಮಪ್ಪ, ಕಾಮರಾಜ್, ಮಹಾರಾಜ್, ಪಾಲಾಕ್ಷ, ಪಟೇಲ್ ಹನುಮಂತರಾಯ, ಹೋಮ ನಾಗರಾಜು, ಬಲರಾಮ್, ತಿಮ್ಮಯ್ಯ, ಮಲ್ಲಿಕಪ್ಪ, ಗಿರಿಜಾ ಶಿವಣ್ಣ, ನಿವೃತ್ತ ಸೈನಿಕ ಅನಂತ್, ಶ್ರೀಧರ್, ಪಾವಗಡ ಪ್ರಕಾಶ್, ರಂಗಮ್ಮ ಶಿವಕುಮಾರ್, ಅಂಬಿಕಾ ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು: ಎತ್ತಿನಹೊಳೆ ಯೋಜನೆಯ ಮೂಲಕ ಅಕ್ಟೋಬರ್ 2026ರ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ನೀರು ಹರಿಸುವ ಉದ್ದೇಶದಿಂದ ಕೈಗೊಳ್ಳಲಾಗಿದ್ದ ಕಾಮಗಾರಿಗಳ ಪ್ರಗತಿ…

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.