ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರದ ಮೂಲಕ ಭಾರತದ ಇತಿಹಾಸವನ್ನು ಪ್ರದರ್ಶನ ಮಾಡಲಾಯಿತು.
ಸಾಕ್ಷ್ಯಚಿತ್ರದಲ್ಲಿ ನೂತನ ಸಂಸತ್ ಭವನ ನಿರ್ಮಾಣ, ಸಿಂಗೋಲ್ ನಿರ್ಮಾಣದ ಕುರಿತು ಕಿರುಚಿತ್ರ ಪ್ರದರ್ಶಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭವಿಷ್ಯದಲ್ಲಿ ಸಂಸದರ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಆ ವೇಳೆ ಎಲ್ಲರೂ ಕುಳಿತುಕೊಳ್ಳಲು ಸ್ಥಳಾವಕಾಶ ಇಲ್ಲದಿರುವುದರಿಂದ ಹೊಸ ಸಂಸತ್ ಭವನದ ಆವಶ್ಯಕತೆ ಇತ್ತು. ಅದನ್ನು ನಿರ್ಮಾಣ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.
ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ಸುಮಾರು 25 ರಾಜಕೀಯ ಪಕ್ಷಗಳ ಸದಸ್ಯರು ಭಾಗವಹಿಸಿದ್ದಾರೆ. ಮತ್ತೊಂದೆಡೆ, ದೇಶದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಇತರ 19 ಸಮಾನ ಮನಸ್ಕ ವಿರೋಧ ಪಕ್ಷಗಳು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


