ಬೆಳಗಾವಿ: ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು, ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದ ವೃದ್ಧೆ ಇಂದು ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ವೃದ್ಧೆಯಾದ ಅಕ್ಕಾತಾಯಿ ಲಂಗೋಟಿ ಅವರು ತನ್ನ ಹತ್ತು ಕಂತಿನ ಗೃಹಲಕ್ಷ್ಮಿ ಹಣವನ್ನ ಕೂಡಿಟ್ಟು ನಿನ್ನೆ ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು.
ಇಂದು ಬೆಳಗಾವಿ ಏರ್ ಪೋರ್ಟ್ನಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅಕ್ಕಾತಾಯಿಯನ್ನು ಸಿಎಂಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಚಯಿಸಿದರು. ಈ ವೇಳೆ ಸಿಎಂಗೆ ಕಂಬಳಿ ಹೊದಿಸಿ, ಹಾರ ಹಾಕಿ ಹೋಳಿಗೆ ತಿನ್ನಿಸಿದ್ದಾರೆ. ಊಟ ಹಾಕಿಸಿದ ವಿಚಾರ ತಿಳಿದ ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ನಿಲ್ಲಿಸಬೇಡಿ ಎಂದು ಅಕ್ಕಾತಾಯಿ ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಸಿಎಂ ಭರವಸೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q