ತಿಪಟೂರು : ಗ್ರಾಮಾಂತರ ತಾಲೂಕಿನ ಬಿಳಿಗೆರೆ ವಲಯದ ಬಿಳಿಗೆರೆ ಗ್ರಾಮದ ಶ್ರೀ ಹೊನ್ನಮ್ಮದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ದೇವಸ್ಥಾನ ಸಮಿತಿಯವರು ಸಲ್ಲಿಸಿದ ಮನವಿಗೆ ಸ್ಪಂದಿಸಿ ₹2,50,000 ಅನುದಾನ ಮಂಜೂರು ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ಅವರು ದೇವಸ್ಥಾನದ ಸಮಿತಿಯವರಿಗೆ ಮಂಜೂರಾತಿ ಪತ್ರ ಹಾಗೂ ಡಿಡಿಯನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ನೀಡಿ, ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತಿಪಟೂರು ತಾಲೂಕಿನ ಯೋಜನಾಧಿಕಾರಿ ಸುರೇಶ್ ಕೆ., ದೇವಸ್ಥಾನ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಸರ್ವ ಸದಸ್ಯರು, ಗ್ರಾಮಸ್ಥರು, ವಲಯದ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
