ರಾಜ್ಯ ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿ ಭೂಮಿ ಸ್ವಾಧೀನ ಮಾಡಿಕೊಟ್ಟರೆ ಒಂದು ತಿಂಗಳೊಳಗೆ 2 ಲಕ್ಷ ಕೋಟಿ ರೂಪಾಯಿ ಅನುದಾನವನ್ನು ಕರ್ನಾಟಕಕ್ಕೆ ನೀಡುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ರಸ್ತೆ ಕಾಮಗಾರಿಗೆ ನಾವು ಒಂದು ತಿಂಗಳೊಳಗೆ 2 ಲಕ್ಷ ಕೋಟಿ ರೂಪಾಯಿ ಮಂಜೂರು ಮಾಡಲು ನಾವು ಸಿದ್ಧರಿದ್ದೇವೆ. ಆದರೆ ರಾಜ್ಯ ಸರ್ಕಾರಕ್ಕೆ ನನ್ನದೊಂದು ಷರತ್ತೇನೆಂದರೆ ಈ ಕಾಮಗಾರಿಗಳಿಗೆ ಭೂಸ್ವಾಧೀನ ಮಾಡಿಕೊಡಬೇಕು ಎಂದಿದ್ದಾರೆ.
ಅರಣ್ಯ ಇಲಾಖೆ ಮತ್ತಿತರ ಸಂಬಂಧಪಟ್ಟ ವಿಭಾಗಗಳಿಂದ ಅನುಮತಿ ಕೊಡಿಸಬೇಕು. ಯಾಕೆಂದರೆ ನಾವು ಗಾಳಿಯಲ್ಲಿ ರಸ್ತೆಗಳನ್ನು ನಿರ್ಮಾಣ ಮಾಡೋದಕ್ಕೆ ಆಗೋದಿಲ್ಲ ಎಂದು ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿ ರಸ್ತೆ ಯೋಜನೆಗಳಿಗಾಗಿ ಅನೇಕ ಸಂಸದರು ನನ್ನನ್ನು ಭೇಟಿಯಾಗಿದ್ದಾರೆ. ಅವರಿಗಾಗಿ 3.5 ಲಕ್ಷ ಕೋಟಿ ರೂ.ಗಳ ಕಾಮಗಾರಿಯನ್ನು ಮಂಜೂರು ಮಾಡಿದ್ದೇನೆ. ಕೇಂದ್ರ ಸರ್ಕಾರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ ಎಂದೂ ಗಡ್ಕರಿ ಅವರು ಸ್ಪಷ್ಟಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


