ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸರ್ಟಿಫೈಡ್ ಡಯಾಬಿಟಿಕ್ ಎಜುಕೇಟರ್(Certified Diabetic Educator) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಜುಲೈ 10, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಮುಖ್ಯ ವ್ಯವಸ್ಥಾಪಕರು (HR)
ಕೈಗಾರಿಕಾ ಆರೋಗ್ಯ ಕೇಂದ್ರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್)
ಸುರಂಜನದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ)
ಬೆಂಗಳೂರು-560017
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA