ಇದೇ ಬರುವ ಜೂನ್ 27 ರಿಂದ ಜುಲೈ 2ರ ವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಏರ್ಪಡಿಸಲಾಗಿದೆ. ಈ ಬಗ್ಗೆ ಅಗತ್ಯ ಸಿದ್ಧತೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟರ್ ರಾಜಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೂರ್ವ ಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯಾವುದೇ ರೀತಿಯ ತೊಂದರೆಗೆ ಆಸ್ಪಂದ ನೀಡದಂತೆ ಕರ್ತವ್ಯ ನಿರ್ವಹಿಸಲು ಹಾಗೂ ಊಟೋಪಚಾರದ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಡಿಸಿ ತಿಳಿಸಿದ್ದಾರೆ.
ಸೈನಿಕ ಭರ್ತಿ ಕಾರ್ಯಾಲಯದ ನಿರ್ದೇಶಕ ಕರ್ನಲ್ ಗೌರವ್ ತಾಪ ಅವರು ಮಾತನಾಡಿ,”ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕಿದೆ.
ಲೋಕೋಪಯೋಗಿ, ಸೆಸ್ಕ್, ಪದವಿ ಪೂರ್ವ ಶಿಕ್ಷಣ, ಅಗ್ನಿಶಾಮಕ ದಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೈದ್ಯಕೀಯ ಶಿಕ್ಷಣ, ಸೆಸ್ಕ್, ಬಿಎಸ್ ಎನ್ ಎಲ್ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಸಹಕಾರ ನೀಡಬೇಕು. ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ನೋಡಲ್ ಅಧಿಕಾರಿ ಮೇಜರ್ ಬಾಲಸುಬ್ರಹ್ಮಣ್ಯಂ ಅವರು ಅಗ್ನಿವೀರ್ ಸೇನಾ ನೇಮಕಾತಿ ಸಂಬಂಧಿಸಿದಂತೆ ಹಲವು ಉಪಯುಕ್ತ ಮಾಹಿತಿಗಳನ್ನು ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


