ಐಪಿಎಲ್ 2024ರಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಆರ್ ಸಿಬಿ ತಂಡದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಆರ್ ಸಿಬಿ ತಂಡದ ಮಾಜಿ ಆಟಗಾರ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.
ಇದೀಗ 64 ರನ್ ಗಳೊಂದಿಗೆ ಈ ದಾಖಲೆಯನ್ನು ಮುರಿಯುವಲ್ಲಿ ಫಾಫ್ ಡುಪ್ಲೆಸಿಸ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಪವರ್ ಪ್ಲೇನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ RCB ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಶಕದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್ ಗಳಲ್ಲಿ 147 ರನ್ ಗಳಿಸಿ ಆಲ್ ಔಟ್ ಆಯಿತು. 148 ರನ್ ಗಳ ಗುರಿ ಬೆನ್ನತ್ತಿದ ಅರ್ ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಫಾಫ್ ಡುಪ್ಲೆಸಿಸ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಹಾಫ್ ಸೆಂಚುರಿ ಬಳಿಕ ಕೂಡ ಆರ್ಭಟ ಮುಂದುವರೆಸಿದ ಆರ್ಸಿಬಿ ನಾಯಕ 23 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 64 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ವಿಶೇಷ ಎಂದರೆ ಈ 64 ರನ್ ಗಳನ್ನು ಫಾಫ್ ಡುಪ್ಲೆಸಿಸ್ ಮೊದಲ 6 ಓವರ್ ಗಳಲ್ಲೇ ಕಲೆ ಹಾಕಿದ್ದರು. ಈ ಮೂಲಕ ಆರ್ ಸಿಬಿ ಪರ ಪವರ್ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA