ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ನಟ ದರ್ಶನ್ ಚಿಕಿತ್ಸೆ ಹಿನ್ನೆಲೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ. ಸದ್ಯ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಅವರಿಗೆ ಸರ್ಜರಿ ನಡೆಸುವುದು ಬಹುತೇಕ ಫಿಕ್ಸ್ ಆಗಿದೆ.
ಹೈಕೋರ್ಟ್ ದರ್ಶನ್ ಗೆ ಚಿಕಿತ್ಸೆಗೆಂದು ಮಧ್ಯಂತರ ಜಾಮೀನು ನೀಡಿದೆ. ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಟ ದರ್ಶನ್ ಗೆ ಫಿಜಿಯೋಥೆರಪಿ ಜೊತೆ ಸರ್ಜರಿ ಅಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದಾರೆ. ಹಿನ್ನೆಲೆಯಲ್ಲಿ ದರ್ಶನ್ ಸರ್ಜರಿಗೆ ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.
ದರ್ಶನ್ ಗೆ ಸರ್ಜರಿ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಜೊತೆ ವೈದ್ಯರು ಚರ್ಚೆ ನಡೆಸಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿಯೇ ದರ್ಶನ್ ಶೀಘ್ರದಲ್ಲೇ ಸರ್ಜರಿಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q