ಗ್ರೀಸ್ ನಗರದ ಲಾರಿಸ್ಸಾ ಬಳಿ ರೈಲು ಡಿಕ್ಕಿಯಾಗಿ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ. ಸುಮಾರು 85 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಸಂಜೆ ಮಧ್ಯ ಗ್ರೀಸ್‌ನಲ್ಲಿ 350 ಪ್ರಯಾಣಿಕರಿದ್ದ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಹದಿನೇಳು ಅಗ್ನಿಶಾಮಕ ದಳಗಳು ಬೆಂಕಿಯನ್ನು ನಂದಿಸಿದವು.
ಅಪಘಾತದ ನಂತರ ಎರಡೂ ರೈಲುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಗಾಯಗೊಂಡ ಸುಮಾರು 40 ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ರೈಲಿನಲ್ಲಿದ್ದ 250 ಕ್ಕೂ ಹೆಚ್ಚು ಜನರನ್ನು ಬಸ್ ಮೂಲಕ ಥೆಸಲೋನಿಕಿಗೆ ಕರೆದೊಯ್ಯಲಾಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


