ಉತ್ತರ ಕಾಶ್ಮೀರದ ಸೇನಾ ಶಿಬಿರದಲ್ಲಿ ಗುರುವಾರ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಓರ್ವ ಸೇನಾಧಿಕಾರಿ ಸಾವನ್ನಪ್ಪಿದ್ದು, ಕನಿಷ್ಠ ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಸೇನಾ ಶಿಬಿರದಲ್ಲಿ ಗುರುವಾರ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಓರ್ವ ಸೇನಾಧಿಕಾರಿ ಸಾವನ್ನಪ್ಪಿದ್ದು, ಕನಿಷ್ಠ ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 10.30ರ ಸುಮಾರಿಗೆ ಕುಪ್ವಾರದ ಗಡಿ ಜಿಲ್ಲೆಯ ಕ್ಯಾಂಪ್ ನೊಳಗೆ ಗ್ರೆನೇಡ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಪ್ಯಾರಾಟ್ರೂಪರ್ ಶಾಮ್ ಸಿಂಗ್ ಶ್ರೀನಗರದ ಸೇನಾ ಮೂಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸೈನಿಕರು ಕಾರ್ಯಾಚರಣೆಗೆ ತಯಾರಿ ನಡೆಸುತ್ತಿದ್ದಾಗ ಗ್ರೆನೇಡ್ ಸ್ಫೋಟಗೊಂಡಿದೆ ಎಂದು ಅವರು ಹೇಳಿದರು. “ಸೈನಿಕರ ಗುಂಪು ಕಾರ್ಯಾಚರಣೆಗಾಗಿ ಹೊರಡುವ ಮೊದಲು ಕಿಟ್ಟಿಂಗ್ ಮಾಡುತ್ತಿದೆ. ಅವರು ಕಾರ್ಯಾಚರಣೆಯ ಸಮಯದಲ್ಲಿ ಅಗತ್ಯವಿರುವ ಶಸ್ತ್ರಾಸ್ತ್ರಗಳನ್ನು ಜೋಡಿಸುತ್ತಿದ್ದರು, ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.