ಔರಾದ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸೋಮವಾರ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಸಂತಪೂರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಸಿ ನೆಡುವುದರ ಮೂಲಕ ‘ಗೃಹಲಕ್ಷ್ಮಿ ದಿನ’ವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಚನ್ನಪ್ಪ ಉಪ್ಪೆ ಅವರು, “ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ದೊಡ್ಡ ಆಸರೆಯಾಗಿವೆ. ವಿಶೇಷವಾಗಿ ಗೃಹಲಕ್ಷ್ಮೀ ಯೋಜನೆಯು ಮಹಿಳೆಯರ ಸ್ವಾವಲಂಬನೆಗೆ ಹೊಸ ದಿಕ್ಸೂಚಿಯಾಗಿದೆ. ಅರ್ಹ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯಗಳನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು” ಎಂದು ಕರೆ ನೀಡಿದರು.
ಇದೇ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, “ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿವೆ. ಗೃಹಲಕ್ಷ್ಮೀ ಯೋಜನೆಯಿಂದಾಗಿ ಲಕ್ಷಾಂತರ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದು, ಕುಟುಂಬದ ನಿರ್ವಹಣೆಯನ್ನು ಆತ್ಮವಿಶ್ವಾಸದಿಂದ ನಿಭಾಯಿಸುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ್, ಗ್ರಾ.ಪಂ ಸದಸ್ಯರಾದ ಶಿವಕುಮಾರ ಪಾಟೀಲ್, ಸಲ್ಲಾವುದ್ದಿನ್ ಜಂಬಗಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ಸಿಡಿಪಿಒ), ಕೆಇಬಿ, ಆಹಾರ ಇಲಾಖೆ, ಯುವನಿಧಿ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಅಲ್ಲದೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


