ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಕಾಲಕಾಲಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಜೆಡಿಎಸ್ ಜಾತ್ಯತೀತ ದಳದ ಶಾಸಕರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಮಂಗಳವಾರ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಹಾಗೂ ಇತರ ನಾಯಕರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಬುಧವಾರ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸ್ವಂತ ಹಣವೆಂಬಂತೆ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಯಾವಾಗ ಬೇಕೋ ಆಗ ಮಾತ್ರ ಜಮೆ ಮಾಡುತ್ತಾರೆ. ಬಹುತೇಕ ಚುನಾವಣಾ ಸಂದರ್ಭದಲ್ಲೇ ಗೃಹಲಕ್ಷ್ಮಿ ಹಣ ಬಿಡುಗಡೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕರಾದ ಶರವಣ, ಮಂಜೇಗೌಡ, ಎಂ.ಟಿ.ಕೃಷ್ಣಪ್ಪ, ಶಾರದ ಪೂರ್ವಿನಾಯಕ್, ಕರ್ರೆಯಮ, ಹರೀಶ್‌ಗೌಡ, ಬಾಲಕೃಷ್ಣ ಮತ್ತಿತರರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4