nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    • ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    ಪಾವಗಡ August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    By Ganesh TumkuruAugust 1, 2026No Comments2 Mins Read
    pavagada.jpg

    ಪಾವಗಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿ ಇದುವರೆಗೂ ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಯಡಿ 323 ಕೋಟಿ ಹಣ ತಾಲೂಕಿಗೆ ಬಿಡುಗಡೆಯಾಗಿದೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷರು, ಜಿ.ಪಂ ಮಾಜಿ ಸದಸ್ಯರಾದ ಪಾಪಣ್ಣ ತಿಳಿಸಿದರು.

    ಅವರು ತಾಪಂ ಆವರಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆ ದೇಶದಲ್ಲೇ ಮಾದರಿ ಯೋಜನೆಯಾಗಿದೆ. ಕರ್ನಾಟಕದಲ್ಲಿ ಈ ಯೋಜನೆ ಘೋಷಣೆಯಾದ ಬಳಿಕ ಹಲವಾರು ರಾಜ್ಯಗಳಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಬೇರೆ ಬೇರೆ ಹೆಸರಿನಲ್ಲಿ ಹಲವಾರು ರಾಜ್ಯಗಳಲ್ಲಿ ಘೋಷಣೆ ಮಾಡಲಾಗಿದೆ. ಬಡ ಮಧ್ಯಮ ವರ್ಗದ ಪಾಲಿಗೆ ಯೋಜನೆ ಶಕ್ತಿದಾಯಕವಾಗಿದೆ. ಇದರಿಂದ ಲಕ್ಷಾಂತರ ಕುಟುಂಬಗಳು ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿದೆ. ಕುಟುಂಬ ನಿರ್ವಹಣೆ, ಶಿಕ್ಷಣ, ವೃದ್ಧರ ಆರೋಗ್ಯ ಸೇರಿದಂತೆ ಹಲವಾರು ರೀತಿಯಲ್ಲಿ ಗೃಹಲಕ್ಷ್ಮಿ ಮನೆಗಳಲ್ಲಿ ಬೆಳಕು ನೀಡುವ ಯೋಜನೆಯಾಗಿದೆ ಎಂದರು.

    ಗೃಹಲಕ್ಷ್ಮಿ ಯೋಜನೆಯಡಿ ತಾಲೂಕಿನಲ್ಲಿ 56,405 ಫಲಾನುಭವಿಗಳಿಗೆ 320.41 ಕೋಟಿ ರೂ. ಬಿಡುಗಡೆಯಾಗಿದೆ. ಯುವ ನಿಧಿಯಡಿ ಪದವಿ ಮುಗಿಸಿದ 11,238 ವಿದ್ಯಾರ್ಥಿಗಳಿಗೆ ಇದುವರೆಗೂ 3,33,63,000 ಕೋಟಿ ರೂ. ಬಿಡುಗಡೆಯಾಗಿದೆ. ಗೃಹಜ್ಯೋತಿ ಯೋಜನೆಯಡಿ 49,558 ಫಲಾನುಭವಿಗಳು ಉಚಿತ ವಿದ್ಯುತ್ ಪಡೆಯುತ್ತಿದ್ದು, ಶಕ್ತಿ ಯೋಜನೆಯಲ್ಲಿ ಇದುವರೆಗೂ 32,59,59,744 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಇದರಿಂದ 33,13,55,703 ಆದಾಯ ಬಂದಿದೆ. ಯಾರೇ ಆಗಲಿ ಯಾವುದೇ ಪಕ್ಷವಾಗಲಿ ಅರ್ಹರಿಗೆ ಕಡ್ಡಾಯವಾಗಿ ರಾಜ್ಯ ಸರ್ಕಾರದ ಸೌಲಭ್ಯ ಕಲ್ಪಿಸಬೇಕೆಂದರು.

    ಅರ್ಹರು ಸೌಲಭ್ಯ ವಂಚಿತರಾಗಿದ್ದಲ್ಲಿ ಅದರ ಹೊಣೆಗಾರಿಕೆ ನಿಮ್ಮದೇ ತಾಲೂಕು ಪಂಚಾಯಿತಿ ಇಒ ಮಧುಸೂದನ್ ಮಾತನಾಡಿ, ಗೃಹಲಕ್ಷ್ಮಿ, ಯುವನಿಧಿ, ಶಕ್ತಿ ಯೋಜನೆ ಹಾಗೂ ಗೃಹಜ್ಯೋತಿ ಯೋಜನೆಗಳಿಗೆ ಅರ್ಹರನ್ನು ಕಡ್ಡಾಯವಾಗಿ ನೋಂದಾಯಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಬಡ ಮಧ್ಯಮ ವರ್ಗದ ಏಳಿಗೆಗಾಗಿ ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳಿಂದ ಅರ್ಹರು ಯಾರೂ ಕೂಡ ವಂಚಿತರಾಗಬಾರದೆಂಬ ದೃಷ್ಟಿಯಿಂದ ಸಭೆ ನಡೆಸುತ್ತಿದ್ದು, ಅರ್ಹರು ಸೌಲಭ್ಯ ವಂಚಿತರಾಗಿದ್ದಲ್ಲಿ ಅದರ ಹೊಣೆಗಾರಿಕೆ ನಿಮ್ಮದೇ ಎಂದರು.

    ಸಭೆಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯರುಗಳಾದ ದಿವಾಕರಪ್ಪ, ಫಕ್ರುದ್ದೀನ್, ಉಮೇಶ್, ವೀರಾಂಜನೇಯ, ಸುಮಾ ಅನಿಲ್, ಸಿಡಿಪಿಒ ಸುಜಾತ, ಬೆಸ್ಕಾಂ ಎಇಇ ಕೃಷ್ಣಮೂರ್ತಿ, ಕೆಎಸ್ ಆರ್ ಟಿಸಿ ಶರಣ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    Ganesh Tumkuru
    • Website

    Related Posts

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಪಾವಗಡ: ತಾಲ್ಲೂಕಿನ ಜನರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಪ್ರಜಾ ಸೇವಾ’ ಆಂದೋಲನದ…

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.