ಮೈಸೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹ ಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ ದೊರೆಯಲಿದ್ದು, ಏಕ ಕಾಲದಲ್ಲಿ ರಾಜ್ಯದ ಮನೆಯೊಡತಿಯರಿಗೆ ಯೋಜನೆ ಪಾವತಿಯಾಗಲಿದೆ ಎಂದು ಸರ್ಕಾರ ಹೇಳಿಕೊಂಡಿದೆ.
ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ನಾಳೆಯ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ವಾಹನ ಸಂಚಾರ ನಿರ್ಬಂಧಿಸಿ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.


