ರಾಯಚೂರು: ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿರುವ ಘಟನೆ ನಡೆದಿದೆ.
ರಾಯಚೂರಿನ ತಿಮ್ಮಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿದೆ.
ತಡರಾತ್ರಿಯಿಂದ ಬೆಳಿಗ್ಗೆವರೆಗೂ ಗಣೇಶ ಮೂರ್ತಿ ವಿಸರ್ಜನೆ ನಡೆದಿದ್ದು, ಮೆರವಣಿಗೆ ವೇಳೆ ಗಲಾಟೆಯಾಗಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


