nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಣದುಬ್ಬರ-ಜಿಎಸ್‌ ಟಿ ವಿರುದ್ಧ ರಸ್ತೆಗಿಳಿದ ಕಾಂಗ್ರೆಸ್‌: ರಾಹುಲ್-ಪ್ರಿಯಾಂಕಾ ಪೊಲೀಸ್‌ ವಶಕ್ಕೆ
    ರಾಷ್ಟ್ರೀಯ ಸುದ್ದಿ August 6, 2022

    ಹಣದುಬ್ಬರ-ಜಿಎಸ್‌ ಟಿ ವಿರುದ್ಧ ರಸ್ತೆಗಿಳಿದ ಕಾಂಗ್ರೆಸ್‌: ರಾಹುಲ್-ಪ್ರಿಯಾಂಕಾ ಪೊಲೀಸ್‌ ವಶಕ್ಕೆ

    By adminAugust 6, 2022No Comments2 Mins Read
    congress protest

    ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಮತ್ತು ಮೆರವಣಿಗೆ ನಡೆಸುತ್ತಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಸಂಸತ್ ಭವನ ಮತ್ತು ರಾಷ್ಟ್ರಪತಿ ಭವನದ ಕಡೆಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಜಾಥಾ ಹೊರಟಿದ್ದರು. ಈ ವೇಳೆ ದೆಹಲಿ ಪೊಲೀಸರು ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ದೆಹಲಿ ಪೊಲೀಸರ ಮೇಲೆ ಹಲ್ಲೆ ಆರೋಪ:

    ಕಸ್ಟಡಿಗೆ ತೆಗೆದುಕೊಳ್ಳುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಪಕ್ಷದ ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ನಾವು ದನಿ ಎತ್ತುತ್ತಿದ್ದೇವೆ. ಆದರೆ ಪೊಲೀಸರು ನಮಗೆ ಮುಂದುವರೆಯಲು ಅವಕಾಶ ನೀಡಲಿಲ್ಲ” ಎಂದು ಹೇಳಿದ್ದಾರೆ.

    “ಈ ಶಕ್ತಿಗಳನ್ನು ವಿರೋಧಿಸುವುದು ನಮ್ಮ ಕೆಲಸ. ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಮ್ಮ ಕೆಲಸ. ಹಣದುಬ್ಬರ ಮತ್ತು ನಿರುದ್ಯೋಗದಂತಹ ಜನರ ಸಮಸ್ಯೆಗಳನ್ನು ತೊಡೆದುಹಾಕುವುದು ನಮ್ಮ ಕೆಲಸ ಮತ್ತು ನಾವು ಅದನ್ನೇ ಮಾಡುತ್ತಿದ್ದೇವೆ” ಎಂದರು.

    ಸಂಸತ್ ಭವನದಿಂದ ಪಕ್ಷದ ಸಂಸದರ ಮೆರವಣಿಗೆ ಪ್ರಾರಂಭವಾಗುವ ಮೊದಲು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೆರವಣಿಗೆಯಲ್ಲಿ ಸ್ವಲ್ಪ ಸಮಯ ಭಾಗಿಯಾಗಿದ್ದರು. ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿ ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ ವಿಜಯ್ ಚೌಕ್‌ನಲ್ಲಿಯೇ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದಾರೆ.

    ಇನ್ನು ಈ ಘಟನೆ ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಹಣದುಬ್ಬರ, ನಿರುದ್ಯೋಗ, ನೀತಿಗಳು ತಂದ ನಾಶದಿಂದ ಈ ಸರ್ವಾಧಿಕಾರಿ ಸರ್ಕಾರಕ್ಕೆ ಭಯವಾಗುತ್ತಿದೆ. ಸತ್ಯಕ್ಕೆ ಹೆದರುವವನು ಧ್ವನಿ ಎತ್ತುವವರಿಗೆ ಬೆದರಿಕೆ ಹಾಕುತ್ತಾನೆ” ಎಂದು ಹೇಳಿದ್ದಾರೆ.

    ಇನ್ನು ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿ, ‘ಇಂದು ಮತ್ತೊಮ್ಮೆ ಕಾಂಗ್ರೆಸ್ ಸಂಸದರಿಗೆ ಹಣದುಬ್ಬರ, ನಿರುದ್ಯೋಗ ಮತ್ತು ಜಿಎಸ್‌ಟಿ ವಿರುದ್ಧ ಪ್ರತಿಭಟಿಸುವ ಪ್ರಜಾಸತ್ತಾತ್ಮಕ ಹಕ್ಕನ್ನು ತಡೆಯಲಾಗಿದೆ. ವಿಜಯ್ ಚೌಕ್‌ ನಲ್ಲಿ ನಮ್ಮನ್ನು ಪೊಲೀಸ್ ವ್ಯಾನ್‌ನಲ್ಲಿ ತುಂಬಿಸಲಾಯಿತು. ಒಂದು ವಿಷಯ ಸ್ಪಷ್ಟವಾಗಿದೆ, ಭಯಪಡುವವರು ಮಾತ್ರ ಹೆದರಿಸಲು ಪ್ರಯತ್ನಿಸುತ್ತಾರೆ” ಎಂದು ಹೇಳಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


    Provided by
    Provided by
    admin
    • Website

    Related Posts

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ…

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.