ಬೆಂಗಳೂರಿನ ಹಲವೆಡೆ ಬೆಳ್ಳಂ ಬೆಳಗ್ಗೆ ಭಾರೀ ಮಳೆಯಾಗಿದೆ. ರಾಮಕೃಷ್ಣ ಆಶ್ರಮ, ಜೆಸಿ ರಸ್ತೆ, ನ್ಯಾಷನಲ್ ಕಾಲೇಜು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದು ವಾಹನ ಸವಾರರ ಸಂಚಾರಕ್ಕೆ ತೊಡಕು ಉಂಟಾಯಿತು.
ಬೆಳಗ್ಗೆ 5 ಗಂಟೆಯಿಂದಲೇ ಕೆಲವೆಡೆ ಸಾಧಾರಣ ಮಳೆಯಾದರೆ ಇನ್ನು ಕೆಲವೆಡೆ ಧಾರಾಕಾರವಾಗಿ ಮಳೆ ಸುರಿಯಿತು. ನ್ಯಾಷನಲ್ ಕಾಲೇಜು ಹಾಗೂ ಲಾಲ್ ಬಾಗ್ ಮಧ್ಯೆ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು.
ಶಾಂತಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಶಿವಾಜಿನಗರ, ವಿಧಾನಸೌಧ, ವಸಂತನಗರ, ಎಂಜಿ ರಸ್ತೆ, ಕಬ್ಬನ್ಪಾರ್ಕ್, ಟ್ಯಾನಿರೋಡ್, ರಾಮಕೃಷ್ಣ ಆಶ್ರಮ, ಬಸವನಗುಡಿ, ಗಿರಿನಗರ, ಶ್ರೀನಿವಾಸ ನಗರ, ಕತ್ರಿಗುಪ್ಪೆ, ಜಯನಗರ, ಬನಶಂಕರಿ ಸೇರಿದಂತೆ ಹಲವೆಡೆ ಮಳೆ ಸುರಿಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296