ನವದೆಹಲಿ: ಗ್ಯಾರೆಂಟಿ ಯೋಜನೆಗಳು ಹೊರೆಯಾಗುತ್ತಿವೆ ಎನ್ನುವುದು ಗೊತ್ತಿದ್ದರೂ, ಬಡವರಿಗಾಗಿ ನಾವು ಸಹಿಸಿಕೊಳ್ಳಬೇಕು ಎನ್ನುವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಪರಮೇಶ್ವರ ನೇತೃತ್ವದ ಸಮಿತಿ. ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು ಎಂದು ಪರಮೇಶ್ವರ್ ಅವರ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು , ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ ಎಂದು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4