ಕೊರಟಗೆರೆ : ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಅರ್ಹ ಫಲಾನುಭವಿಗಳಿಗೂ ತಲುಪಿಸುವ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಲಾಗುವುದು ಎಂದು ಕೊರಟಗೆರೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅದ್ಯಕ್ಷ ಬಿ.ಸಿ.ವೆಂಕಟೇಶ್ಮೂರ್ತಿ ತಿಳಿಸಿದರು.
ಅವರು ಕೊರಟಗೆರೆ ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಸಮಿತಿಯ ನೂತನ ಆಡಳಿತ ಕಚೇರಿಯನ್ನು ಪ್ರಾರಂಭಿಸಿ ಮಾತನಾಡಿ, ಸರ್ಕಾರದ ಗೃಹ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ರವರ ಮಾರ್ಗದರ್ಶನದಲ್ಲಿ ಈ ಅನುಷ್ಠಾನ ಸಮಿತಿಯು ಕಾರ್ಯನಿರ್ವಹಿಸಲಿದ್ದು, ನನ್ನೊಂದಿಗೆ 15 ಉಪಾಧ್ಯಕ್ಷರನ್ನು ಈ ಸಮಿತಿಯಲ್ಲಿ ನೇಮಕ ಮಾಡಿದ್ದು, ನಾವೆಲ್ಲರು ಒಟ್ಟುಗೂಡಿ ಈ ಕಾರ್ಯಕ್ರಮಕ್ಕೆ ಯಾವುದೇ ಕುಂದು–ಕೊರತೆ ಬಾರದಂತೆ ನಿಷ್ಠೆಯಿಂದ ಕೆಲಸ ಮಾಡುತ್ತೇವೆ ಎಂದರು.
ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಸರ್ಕಾರವು ಜಾರಿಗೊಳಿಸಿರುವ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ವೆಂಕಟೇಶ್ ಮೂರ್ತಿ ರವರ ಅಧ್ಯಕ್ಷತೆಯಲ್ಲಿ 15 ಉಪಾಧ್ಯಕ್ಷರ ಸಮಿತಿಯನ್ನು ಸರ್ಕಾರವು ರಚನೆ ಮಾಡಿದ್ದು, ಈ ಸಮಿತಿಗೆ ತಾಲ್ಲೂಕು ಆಡಳಿತ ಸೇರಿದಂತೆ ವಿವಿದ ಇಲಾಖೆಗಳು ಸಹಕಾರ ನೀಡಲಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ಈ ಯೋಜನೆಯ ಫಲವನ್ನು ತಲುಪಿಸುವ ಕೆಲಸ ಮಾಡಲಾಗುವುದು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರೆಕೆರೆ ಶಂಕರ್ ಮಾತನಾಡಿ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಈ ಕಮಿಟಿಯನ್ನು ರಚನೆ ಮಾಡಿದ್ದು, ಸಮಾಜದ ಬಡ ಮತ್ತು ದುರ್ಬಲ ವರ್ಗದವರಿಗೆ ಈ ಯೋಜನೆಯನ್ನು ತಲುಪಿಸುವ ಕಾರ್ಯವನ್ನು ಸಮಿತಿ ಮಾಡಬೇಕಿದೆ. ವಿಶೇಷವೆಂದರೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಅಧ್ಯಕ್ಷತೆಯನ್ನು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರು ವಹಿಸಿಕೊಂಡಿದ್ದರು. ಇಂದು ಅವರ ಗ್ಯಾರಂಟಿ ಯೋಜನೆಯ ಆಲೋಚನೆ ಇತರ ರಾಜ್ಯಗಳಲ್ಲಿ ಎಲ್ಲಾ ಪಕ್ಷಗಳ ಆಡಳಿತ ಸರ್ಕಾರಗಳು ಜಾರಿಗೆ ತಂದಿವೆ ಎಂದರು.
ಈ ಸಂದರ್ಭದಲ್ಲಿ ಗೃಹ ಸಚಿವರ ವಿಶೇಷ ಅಧಿಕಾರಿ ನಾಗಣ್ಣ, ತಾ.ಪಂ.ಇ.ಓ.ಅಪೂರ್ವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ನಾರಾಯಣ ಮತ್ತು ಅರಕೆರೆ ಶಂಕರ್ ಮುಖಂಡರುಗಳಾದ ಮಹಾಲಿಂಗಯ್ಯ, ಎ.ಡಿ.ಬಲರಾಮಯ್ಯ, ಎಲ್.ರಾಜಣ್ಣ, ಈಶ್ವರಯ್ಯ, ಮಹಿಳಾ ಅಧ್ಯಕ್ಷೆ ಜಯಮ್ಮ, ಕವಿತ, ಸಮಿತಿ ಉಪಾಧ್ಯಕ್ಷರುಗಳಾದ ಗೋಪಾಲಕೃಷ್ಣ, ರಿಯಾಜ್ ಅಹಮದ್, ಕಿಶೋರ್, ವೀರಣ್ಣಗೌಡ, ರೋಹಿತ್, ಚಂದ್ರಶೇಖರ್, ಶ್ರೀವಿದ್ಯಾ, ರಾಘವೇಂದ್ರ, ಪುಟ್ಟಸ್ವಾಮಿ, ಪವನ್ ಕುಮಾರ್, ಆನಂದ್, ಚಂದ್ರಕಲಾ, ಗುರು ಶಾಂತಪ್ಪ, ಶಿವಕುಮಾರ್ ಸೇರಿದಂತೆ ಇತರರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx