ವಿಜಯಪುರ: ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಡವರು, ನಿರ್ಗತಿಕರಿಗೆ ತಲುಪ ಬೇಕು, ಶ್ರೀಮಂತರಿಗಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಕೀ ಯೋಜನೆಯನ್ನು ಉಳ್ಳವರು ತೆಗೆದುಕೊಳ್ಳಬಾರದು, ಬಡವರಿಗೆ ಹೋಗಬೇಕು. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಲು ಸರ್ಕಾರಿ ಮಟ್ಟದಲ್ಲಿ ಯಾವುದೇ ಚರ್ಚೆ ಇಲ್ಲ. ಆದರೆ, ಶ್ರೀಮಂತರು, ಉಳ್ಳವರು ಯೋಜನೆ ಪ್ರಯೋಜನಗಳನ್ನು ಸ್ವಯಂ ಪ್ರೇರಣೆಯಿಂದ ಬಿಡಬೇಕೆಂಬುದು ನನ್ನ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಸರ್ಕಾರವೇ ಶ್ರೀಮಂತರನ್ನು ಗೃಹಲಕ್ಷ್ಮೀ ಯೋಜನೆಯಿಂದ ತೆಗೆದುಹಾಕುವ ಕೆಲಸ ಮಾಡಬೇಕು. ಯೋಜನೆಯಿಂದ ಇನ್ನೂ ಹೊರಗುಳಿದಿರುವ ಬಡವರನ್ನು ಸೇರ್ಪಡೆಗೊಳಿಸಬೇಕೆಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4