ತುಮಕೂರು: ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ತುಮಕೂರು ತಾಲ್ಲೂಕಿನಲ್ಲಿ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತುಮಕೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಎಲ್.ರಮೇಶ್ ಸೂಚಿಸಿದರು.
ಅವರು ಮಂಗಳವಾರ ತುಮಕೂರು ತಾಲ್ಲೂಕು ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ಪಡೆದು, ಸದರಿ ಯೋಜನೆಗಳನ್ನು ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ಶೀಘ್ರಗತಿಯಲ್ಲಿ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತುಮಕೂರು ತಾಲ್ಲೂಕಿನ ಗ್ಯಾರಂಟಿ ಯೋಜನೆಗಳ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಕುಮಾರ್ ಕೆ., ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ಅನುಷ್ಠಾನ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q