ತುಮಕೂರು: ಗುಬ್ಬಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆಯು APEDA ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ 12ರಂದು ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಹೋಬಳಿ ನೆಟ್ಟಿಕೆರೆ ಗ್ರಾಮದಲ್ಲಿ ಅಡಿಕೆ ಬೆಳೆ ಕುರಿತು ರೈತರಿಗೆ ತರಬೇತಿಯನ್ನು ಆಯೋಜಿಸಿದೆ.
ಅಡಿಕೆ ಉತ್ಪಾದನೆಯಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ, ಅಡಿಕೆಯಲ್ಲಿ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ, ಸುಸ್ಥಿರ ಅಡಿಕೆ ಕೃಷಿ, ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆ ಮತ್ತು ಇತರ ಕೃಷಿ ಉತ್ಪನ್ನಗಳಿಗೆ ರಫ್ತು ಅವಕಾಶಗಳ ಕುರಿತು ತರಬೇತಿ ನೀಡಲಾಗುವುದು.
ಹೆಚ್ಚಿನ ಸಂಖ್ಯೆಯಲ್ಲಿ ರೈತ ಫಲಾನುಭವಿಗಳು ತರಬೇತಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪುಷ್ಪಲತಾ ಎ.ಎಸ್. ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


