nammatumakuru

    Subscribe to Updates

    Get the latest creative news from FooBar about art, design and business.

    What's Hot

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026
    Facebook Twitter Instagram
    ಟ್ರೆಂಡಿಂಗ್
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್
    ಗುಬ್ಬಿ April 24, 2026

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminApril 24, 2026No Comments2 Mins Read

    ಗುಬ್ಬಿ: “ತನ್ನ ಕೆಲಸದಲ್ಲಿ ದೇವರನ್ನು ಕಾಣು ಎಂದು ಹೇಳಿದ ಬಸವಣ್ಣನವರ ನಾಡು ಇದು. ದೇವರು ಇದ್ದಾನೆ ಎಂಬುದು ಅವರವರ ನಂಬಿಕೆಯಾಗಿದ್ದು, ಕೋಟ್ಯಾಂತರ ಜನರು ಆ ನಂಬಿಕೆಯ ಮೇಲೆ ಜೀವನ ಸಾಗಿಸುತ್ತಿದ್ದಾರೆ,” ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

    ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಶಿಲಾ ದೇವಾಲಯ ಲೋಕಾರ್ಪಣೆ, ಸಂಪ್ರೋಕ್ಷಣೆ, ಸ್ಥಿರ ಬಿಂಬ ಪ್ರತಿಷ್ಠಾಪನೆ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಪ್ರತಿಯೊಬ್ಬರೂ ಉತ್ತಮ ಕೆಲಸ ಮಾಡಿದಾಗ ದೇವರು ರಕ್ಷಣೆ ಮಾಡುತ್ತಾನೆ. ದೇವಾಲಯಗಳಿಗೆ ಹೋದಾಗ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಇದೇ ಕಾರಣಕ್ಕೆ ಹಳ್ಳಿಗಳಿಂದ ನಗರಗಳವರೆಗೆ ದೇವಾಲಯಗಳು ನಿರ್ಮಾಣಗೊಂಡಿವೆ. ಕಷ್ಟ ಬಂದಾಗ ದೇವರ ಮೊರೆ ಹೋಗುವುದು ಪುರಾತನ ಕಾಲದಿಂದಲೂ ಬಂದ ನಂಬಿಕೆ. ‘ನನ್ನನ್ನು ಎಂಎಲ್ಎ ಮಾಡು’ ಎಂದು ಕೂಡ ದೇವರಲ್ಲಿ ಪ್ರಾರ್ಥಿಸುತ್ತೇವೆ. ಪ್ರಾರ್ಥನೆಯಿಂದ ಮನಸ್ಸಿಗೆ ಶಾಂತಿ ಮತ್ತು ಕೆಲಸಗಳು ಯಶಸ್ವಿಯಾಗುತ್ತವೆ ಎಂಬ ಗಾಢ ನಂಬಿಕೆ ನಮ್ಮಲ್ಲಿದೆ ಎಂದರು.

    ಗುಬ್ಬಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಹಾಗೂ ಪೊಲೀಸ್ ಕ್ವಾರ್ಟರ್ಸ್ ನಿರ್ಮಾಣದ ಬೇಡಿಕೆಯನ್ನು ಶೀಘ್ರದಲ್ಲೇ ಈಡೇರಿಸಲಾಗುವುದು. ಈಗಾಗಲೇ ಮಧುಗಿರಿ, ಪಾವಗಡ, ಕೊರಟಗೆರೆಯಲ್ಲಿ ವಸತಿಗೃಹ ನಿರ್ಮಾಣ ಮಾಡಲಾಗಿದೆ ಎಂದು ಇದೇ ವೇಳೆ ಭರವಸೆ ನೀಡಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎಸ್.ಆರ್. ಶ್ರೀನಿವಾಸ್, “ಗುಬ್ಬಿ ತಾಲೂಕಿನ ಮೂಲೆ ಮೂಲೆಯಲ್ಲಿದ್ದ ಪುರಾತನ ದೇವಾಲಯಗಳು ಇಂದು ಜೀರ್ಣೋದ್ಧಾರಗೊಳ್ಳುತ್ತಿವೆ. ಜನರಲ್ಲಿ ಧಾರ್ಮಿಕ ಭಾವನೆ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ. ಆದರೆ, ದೇವಾಲಯ ನಿರ್ಮಾಣದ ಜೊತೆಗೆ ಪ್ರತಿಯೊಬ್ಬರೂ ತಮ್ಮ ಹೆತ್ತ ತಂದೆ-ತಾಯಿಯನ್ನು ಗೌರವದಿಂದ ಸಾಕಿ ಸಲಹುವ ಕೆಲಸ ಮಾಡಬೇಕು,” ಎಂದು ಕರೆ ನೀಡಿದರು.

    ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ದೇವಾಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಿಸಿಕೊಡುವಂತೆ ಸಚಿವರಿಗೆ ಮನವಿ ಮಾಡಿದರು.

    ಚಾಲುಕ್ಯ ಆಸ್ಪತ್ರೆ ಸಿಇಒ ಡಾ. ನಾಗಭೂಷಣ್, ಗುಬ್ಬಿಯಲ್ಲಿ ನಿರ್ಮಾಣವಾಗುತ್ತಿರುವ ಹೈಟೆಕ್ ಬಸ್ ನಿಲ್ದಾಣಕ್ಕೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಹೆಸರನ್ನು ನಾಮಕರಣ ಮಾಡುವಂತೆ  ಅವರು ಒತ್ತಾಯಿಸಿದರು.

    ಕಾರ್ಯಕ್ರಮದಲ್ಲಿ ತೋರೆಮಠದ ಅಟವಿ ಚನ್ನಬಸವ ಶಿವಯೋಗಿ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕೆ.ಆರ್. ವೆಂಕಟೇಶ್, ಛಲವಾದಿ ಸಮುದಾಯದ ತಾಲ್ಲೂಕು ಅಧ್ಯಕ್ಷ ಈರಣ್ಣ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ರೇಣುಕಾ ಸ್ವಾಮಿ, ಮಹಮದ್ ಸಾದಿಕ್, ಕುಮಾರ್, ಮುಖಂಡರಾದ ಗೋಪಾಲ, ಯತೀಶ್, ಕಿಟ್ಟದಕುಪ್ಪೆ ನಾಗರಾಜು ಸೇರಿದಂತೆ ದೇವಾಲಯದ ಸಮಿತಿಯವರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ

    May 23, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಅಪರೂಪದ ವಿಸ್ಮಯ ಘಟನೆಯೊಂದು ನಡೆದಿದೆ. ಬರೋಬ್ಬರಿ…

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.