ಗುಬ್ಬಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಬಳಿ ನಡೆದಿದೆ.
ರೈಲ್ವೆ ಇಲಾಖೆಯ ನಿವೃತ್ತ ನೌಕರ ತಿಮ್ಮಯ್ಯ(70) ಮೃತಪಟ್ಟವರು ಎನ್ನಲಾಗಿದೆ. ಟಿವಿಎಸ್ ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಂ ತಿಮ್ಮಯ್ಯ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ಘಟನಾ ಸ್ಥಳಕ್ಕೆ ಗುಬ್ಬಿ ಪಿಎಸ್ಐ ಮುತ್ತುರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಭೀಕರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭೀಕರ ಅಪಘಾತ ಕಂಡು ಜನ ಬೆಚ್ಚಿಬಿದ್ದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy