ಗುಬ್ಬಿ: ಗುಬ್ಬಿ ತಾಲೂಕಿನ ತ್ಯಾಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಜನವರಿ 30ರಂದು ನೂರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದುಳಿದ ವರ್ಗದ ಮಾಜಿ ಸದಸ್ಯ ಯೋಗಾನಂದ ಕುಮಾರ್ ತಿಳಿಸಿದರು.
ಗುಬ್ಬಿ ತಾಲೂಕಿನ ತ್ಯಾಗಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತ್ಯಾಗಟೂರು ಸರ್ಕಾರಿ ಶಾಲೆ ನೂರು ದಿನದ ಸಂಭ್ರಮಾಚರಣೆಯಲ್ಲಿದೆ. ಈ ಸರ್ಕಾರಿ ಶಾಲೆಯಲ್ಲಿ 130 ಮಕ್ಕಳು ಇದ್ದು, ಇಲ್ಲಿನ ಶಿಕ್ಷಕರು ಶಿಕ್ಷಕಿಯರು ಉತ್ತಮ ಶಿಕ್ಷಣವನ್ನು ನೀಡುತ್ತಿರುವ ಹಿನ್ನಲೆಯಲ್ಲಿ ಶತಮನೋತ್ಸವ ಆಚರಿಸಿಕೊಳಲು ಸಿದ್ದವಾಗಿದೆ. ಶತಮಾನೋತ್ಸವಕ್ಕೆ ಕಾರ್ಯಕ್ರಮಕ್ಕೆ ತುಮಕೂರು ರಾಮಕೃಷ್ಣ ಮಠದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಗಳು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ವಹಿಸಲಿದ್ದು, ಅಧ್ಯಕ್ಷತೆಯನ್ನು ತೆಂಗು ನಾರು ಮಹಾಮಂಡಳಿಯ ನಿಕಟಪೂರ್ವ ಅಧ್ಯಕ್ಷರಾದ ಟಿಎಸ್ ಕಿಡಿಗಾರಪ್ಪ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ತುಮಕೂರು ಉಸ್ತುವಾರಿ ಸಚಿವ ಜಿ ಪರಮೇಶ್ವರ್ ವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಆರ್.ಶ್ರೀನಿವಾಸ್ ವಹಿಸಲಿದ್ದಾರೆ. ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಓಂಕಾರ್ ಪ್ರಸಾದ್ ಮಾತನಾಡಿ, ತ್ಯಾಗಟೂರು ಸರ್ಕಾರಿ ಶಾಲೆ ನೂರು ವರ್ಷ ಪೂರೈಸಿದ್ದ ಹಿನ್ನಲೆಯಲ್ಲಿ ಶತಮಾನೋತ್ಸವ ಆಚರಣೆಗೆ ಸಿದ್ದವಾಗಿದೆ.ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಎಲ್ಲ ಶಿಕ್ಷಕರಿಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು , ಶತಮಾನೋತ್ಸವ ಸಮಾರಂಭಕ್ಕೆ ಊರಿನ ಹಳೆಯ ವಿದ್ಯಾರ್ಥಿಗಳ ಶ್ರಮ ಜಾಸ್ತಿಯಿದ್ದು ಎಲ್ಲರನ್ನು ಕಾರ್ಯಕ್ರಮದಲ್ಲಿ ವಿಶೇಷವಾಗಿ ಸನ್ಮಾನಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಶಾಸಕ ಎಸ್.ಆರ್.ಶ್ರೀನಿವಾಸ್, ಬಿಓ ನಟರಾಜು, ಜಿಲ್ಲಾಧಿಕಾರಿಗಳು ಎಲ್ಲ ಅಧಿಕಾರಿಗಳು ಪಕ್ಷಾತೀತವಾಗಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದ್ದು, ವಿಶೇಷವಾಗಿ ಸಂಜೆ ಮಕ್ಕಳ ಸಂಸ್ಕಾತಿಕ ಕಾರ್ಯಕ್ರಮ ನಡೆಯಲಿದೆ. ಜತೆಗೆ ಈ ವರ್ಷದಿಂದ ತ್ಯಾಗಟೂರು ಶಾಲೆಯಲ್ಲಿ ಇಂಗ್ಲೀಷ್ ಶಾಲೆಯನ್ನು ಕೂಡ ಪ್ರಾರಂಭ ಮಾಡಿದೇವೆ. ಸರ್ಕಾರಿ ಶಾಲೆ ಖಾಸಗಿ ಶಾಲೆಗಳನ್ನು ಸೆಡ್ಡು ಹೊಡೆಯುತ್ತಿದೆ. ಈ ಭಾಗದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ. ಇಲ್ಲಿ ಶಿಕ್ಷಕರು ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಎಂದು ತಿಳಿಸಿದರು.
ವರದಿ: ಚೇತನ್ ಗೌಡ, ಗುಬ್ಬಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


