ಗುಬ್ಬಿ: ತಾಲ್ಲೂಕಿನ ಎಂ.ಎಚ್. ಪಟ್ಟಣ ಗೇಟ್ ಬಳಿ ಇರುವ ಹೋಟೆಲ್ ವೊಂದರಲ್ಲಿ ಪರಿಶಿಷ್ಟ ಜಾತಿಯ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಪಟ್ಟಣದ ಯಶವಂತ (25) ಎಂಬ ಯುವಕ ಜಿಎನ್ ಬಿ ಸ್ಪಿರಿಟ್ ಆ್ಯಂಡ್ ಸ್ಟೇ ಹೋಟೆಲ್ ಗೆ ಊಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹೋಟೆಲ್ ಮಾಲೀಕ ಮತ್ತು ಆತನ ಸಹಚರರು ಸೇರಿ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಯ ತೀವ್ರತೆಯಿಂದಾಗಿ ಯಶವಂತ ಅವರ ಕೈಮೂಳೆಗೆ ಗಂಭೀರ ಪೆಟ್ಟು ಬಿದ್ದಿದೆ. ಪ್ರಸ್ತುತ ಅವರು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಕುರಿತು ಮಾಹಿತಿ ಪಡೆದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ಯುವಕನಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಮತ್ತು ಸಹಚರರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ (Atrocity Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ವೀಣಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


