ಗುಬ್ಬಿ: ರಾಯಚೂರು ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ಗಣರಾಜ್ಯೋತ್ಸವ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಫೊಟೋ ತೆರವುಗೊಳಿಸಿ, ಉದ್ಧಟತನ ತೋರಿರುವುದನ್ನು ವಿರೋಧಿಸಿ ಗುಬ್ಬಿ ತಾಲೂಕು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಚನ್ನಬಸವೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಗುಬ್ಬಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ, ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವಿರುದ್ಧ ಘೋಷಣೆ ಕೂಗುವ ಮೂಲಕ ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ಪ್ರತಿಕೃತಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ, ಕಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎಲ್.ರವಿಕುಮಾರ್, ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ, ಕಡಬ ಶಂಕರ್, ಕೋಡಿಯಾಲ ಮಹದೇವ್, ಕುಂದರನಹಳ್ಳಿ ನಟರಾಜ್, ಗಿರೀಶ್, ಲಕ್ಕೇನಹಳ್ಳಿ ನರಸೀಯಪ್ಪ, ಹಾಗಲವಾಡಿ ಚಿರಂಜೀವಿ, ಮಂಜೇಶ್, ಯಲಚಿಹಳ್ಳಿ ನಾರಾಯಣ್, ಇಡಗೂರು ಮಂಜುನಾಥ್, ಮಂಚಿಹಳ್ಳಿ ಶಿವಸ್ವಾಮಿ ಇತರ ದಲಿತ ಮುಖಂಡರು ಹಾಜರಿದ್ದರು.
ವರದಿ: ಮಂಜುನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB