ತುಮಕೂರು: ಗುಬ್ಬಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಗುಬ್ಬಿ ಪಟ್ಟಣದ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ, ಗುಬ್ಬಿ ಪಟ್ಟಣದ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರವರ್ಗ–1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50ಲಕ್ಷ ಹಾಗೂ ಪ್ರವರ್ಗ–2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ. ಮಿತಿಯೊಳಗಿರಬೇಕು.
ಅರ್ಹ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಜೂನ್ 20ರೊಳಗಾಗಿ ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಿ-ಅಂಚೆ: bcwdhelpline@gmail.com ಮೂಲಕ ಅಥವಾ ಜಿಲ್ಲಾ/ ತಾಲ್ಲೂಕು ಮಟ್ಟದ ಇಲಾಖಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ವಾ.ಸಂ.08131–222456 ಅಥವಾ ಸಹಾಯವಾಣಿ ಸಂಖ್ಯೆ: 8050770004 / 8050770005ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW