ಬೆಂಗಳೂರು: ಗುಬ್ಬಿ ಶ್ರೀನಿವಾಸ್ ಅವರು ಇಂದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದು, ಕಾರ್ಯಕ್ರಮ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ನೊಳಗೆ ಅಸಮಾಧಾನ ಸ್ಫೋಟಗೊಂಡಿದೆ.
ಹೌದು…! ವರದಿಗಳ ಪ್ರಕಾರ, ತುಮಕೂರಿನ ಪ್ರಭಾವಿ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿಯೂ ಆಗಿರುವ, ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ಅವರಿಂದ ಪಕ್ಷವು ಯಾವುದೇ ಅಭಿಪ್ರಾಯ ಪಡೆಯದೇ ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ ಅನ್ನೋ ಅಸಮಾಧಾನ ಕೇಳಿ ಬಂದಿದೆ.
ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯಕ್ರಮಕ್ಕೆ ಜಿ.ಪರಮೇಶ್ವರ್ ಅವರನ್ನು ಆಹ್ವಾನಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎನ್ನುವ ಅಸಮಾಧಾನ ಪಕ್ಷದೊಳಗೆ ಕೇಳಿ ಬಂದಿದೆ.
ಈ ಹಿಂದೆ ಕೂಡ ಪರಮೇಶ್ವರ್ ಅವರ ಗಮನಕ್ಕೆ ಬಾರದೇ ಕಾಂಗ್ರೆಸ್ ನಲ್ಲಿ ಹಲವಾರು ಚಟುವಟಿಕೆಗಳನ್ನು ಮಾಡಲಾಗಿತ್ತು. ಪಕ್ಷದ ಹಿರಿಯ ಮುಖಂಡರನ್ನು ಕಡೆಗಣಿಸುವ ಕಾಂಗ್ರೆಸ್ ನಾಯಕರ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


