ಗುಬ್ಬಿ: ತಾಲೂಕಿನ ಕಸಬಾ ಹೋಬಳಿಯ ಹೊದಲೂರು ಗ್ರಾಮದ ಶ್ರೀ ಕೆಂಪಮ್ಮ ದೇವಿ ಮತ್ತು ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿದ್ದು ಅಗ್ನಿಕೊಂಡವನ್ನ ಹಾಯುವ ಮೂಲಕ ಭಕ್ತರು ತಮ್ಮ ಹರಕೆಯನ್ನು ಆಚರಿಸಿಕೊಂಡರು.
ಜಾತ್ರಾ ಮಹೋತ್ಸವಕ್ಕೆ ಸಾವಿರಾರು ಭಕ್ತರು ಜಿಲ್ಲೆಯ ಹಲವು ಭಾಗಗಳಿಂದ ಆಗಮಿಸಿ ತಾಯಿಯ ದರ್ಶನವನ್ನು ಪಡೆದರು.
ಮಂಗಳವಾರ ಮಧ್ಯರಾತ್ರಿಯವರೆಗೆ ಮೆರವಣಿಗೆ ನಡೆದಿದ್ದು ಸೋಮನ ಕುಣಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎಲ್ಲಾ ದೇವರ ಉತ್ಸವ ನಡೆದಿದ್ದು ಬುದುವಾರ ಬೆಳಗಿನ ಜಾವ ಅಗ್ನಿಕೊಂಡ ತುಳಿಯುವ ಮೂಲಕ ಸಾವಿರಾರು ಭಕ್ತರು ಹರಕೆ ತೀರಿಸಿದರು.
ನಂತರ ಆರತಿ ಮೆರವಣಿಗೆ ನೂರಾರು ಮಹಿಳೆಯರು ಬಾಯಿ ಬೀಗಹಾಕಿಕೊಂಡು ಮೆರವಣಿಗೆ ಮೂಲಕ ಊರಿನ ಬೀದಿಗಳಲ್ಲಿ ಆರತಿಹೊತ್ತು ದೇವರಿಗೆ ಅರ್ಪಣೆ ಮಾಡಿದರು. ಗುಬ್ಬಿ ಹೊದಲೂರು ಗ್ರಾಮದಲ್ಲಿ ಶ್ರೀ ಕೆಂಪಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯಿತು.
ವರದಿ: ಚೇತನ್ ಗೌಡ, ಗುಬ್ಬಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


