ತುಮಕೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ಕಾರೇಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪೆಟ್ಟಿಗೆ ಅಂಗಡಿಯನ್ನಿಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ವೃದ್ಧೆಯೊಬ್ಬರ ಚಿನ್ನದ ಸರವನ್ನು ಸರಗಳ್ಳರು ಕದ್ದೊಯ್ದ ಘಟನೆ ನಡೆದಿದೆ.
ಕೆಂಪಮ್ಮ ಎಂಬ ವೃದ್ಧೆ ಸರ ಕಳೆದುಕೊಂಡ ವೃದ್ಧೆಯಾಗಿದ್ದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವೇಳೆ ಅವರ ಕೊರಳಿನಲ್ಲಿದ್ದ ಚಿನ್ನವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.
ವೃದ್ಧೆ ಕೆಂಪಮ್ಮ ಅವರನ್ನು ಸಿಗರೇಟ್ ಕೇಳುವ ನೆಪದಲ್ಲಿ ಬಂದ ಕಳ್ಳರು ಆಕೆಯ ಕೊರಳಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಇದರಿಂದ ಜನ ಭಯಭೀತರಾಗಿದ್ದು, ಸರ ಕದ್ದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


