ಗುಬ್ಬಿ: ನಗರದ ಚಿಕ್ಕೋನಹಳ್ಳಿ ಮಾರ್ಗದ ಎಡೆಯೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯು ಅವೈಜ್ಞಾನಿಕವಾಗಿದ್ದು, ಇಲ್ಲಿ ಅಪಘಾತಗಳು ಸರ್ವೇ ಸಾಮಾನ್ಯ ಎಂಬಂತಾಗಿದೆ. ಕೆಶಿಎಫ್ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಈ ರಸ್ತೆಯ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರಿಗೆ ನೆಮ್ಮದಿ ಇಲ್ಲದಂತಾಗಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಇಂದು ರಸ್ತೆ ಡಿವೈಡರ್ ಗೆ ಲಾರಿಯೊಂದು ಡಿಕ್ಕಿ ಹೊಡೆದು ಮಗುಚಿ ಬಿದ್ದಿದ್ದು, ಸ್ಥಳದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿತ್ತು. ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು, ಕಿರಿದಾದ ರಸ್ತೆಗೆ ಡಿವೈಡರ್ ಹಾಕಲಾಗಿರುವುದರಿಂದ ಆಗಾಗ ಇಲ್ಲಿ ಅಪಘಾತಗಳಾಗುತ್ತಿವೆ ಎಂದು ರೈತ ಮುಖಂಡ ಲೋಕೇಶ್ ಆರೋಪಿಸಿದ್ದಾರೆ.
ಈ ರಸ್ತೆ ಅವ್ಯವಸ್ಥೆಯನ್ನು ಶೀಘ್ರವೇ ಪರಿಹರಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿ ರಸ್ತೆ ಸೂಚನಾ ಫಲಕವನ್ನು ಅಳವಡಿಸಿ ವೈಜ್ಞಾನಿಕವಾಗಿ ರಸ್ತೆಯನ್ನು ನಿರ್ಮಾಣ ಮಾಡಬೇಕು. ಇಲ್ಲವಾದರೆ ಸಂಬಂಧ ಪಟ್ಟ ಇಲಾಖೆಯ ವಿರುದ್ಧ ಸಾರ್ವಜನಿಕರು ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ರೈತ ಸಂಘದ ಮುಖಂಡ ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700