nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ

    June 5, 2026

    ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ

    June 5, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026
    Facebook Twitter Instagram
    ಟ್ರೆಂಡಿಂಗ್
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    • ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!
    • ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
    • ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
    • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಜರಾತ್ ಎಎಪಿ ಕಚೇರಿ ಮೇಲೆ ಪೊಲೀಸರ ದಾಳಿ
    ರಾಷ್ಟ್ರೀಯ ಸುದ್ದಿ September 12, 2022

    ಗುಜರಾತ್ ಎಎಪಿ ಕಚೇರಿ ಮೇಲೆ ಪೊಲೀಸರ ದಾಳಿ

    By adminSeptember 12, 2022No Comments2 Mins Read
    aravind kejrival

    ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಆಮ್ ಆದ್ಮಿ ಪಕ್ಷದ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

    ಪೊಲೀಸರ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಆಮ್‌ ಆದ್ಮಿ ಪಕ್ಷ ಗುಜರಾತ್‌ನಲ್ಲಿ ಎಎಪಿ ಪಕ್ಷಕ್ಕೆ ಸಿಗುತ್ತಿರುವ ಜನ ಬೆಂಬಲ ಕಂಡು ಬಿಜೆಪಿ ಆತಂಕಗೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಹಮದಾಬಾದ್‌ಗೆ ಬಂದಾಗಲೇ ಈ ದಾಳಿ ನಡೆಸಲಾಗಿದೆ ಎಂದು ದೂರಿದೆ.


    Provided by
    Provided by

    ಪೊಲೀಸರ ದಾಳಿ ಕುರಿತು ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದು, “ಪಕ್ಷದ ಕಚೇರಿಯಲ್ಲಿರುವ ನಾಯಕರು, ಕಾರ್ಯಕರ್ತರು ಪ್ರಮಾಣಿಕರು. ಕಚೇರಿಯಲ್ಲಿ ಪೊಲೀಸರಿಗೆ ಏನೂ ಸಿಕ್ಕಿಲ್ಲ” ಎಂದು ಹೇಳಿದ್ದಾರೆ.

    ಎಎಪಿ ಕಚೇರಿ ಮೇಲೆ ದಾಳಿ ಏಕೆ ನಡೆಸಲಾಗಿದೆ?. ದಾಳಿಯ ವೇಳೆ ಸಿಕ್ಕಿರುವುದು ಏನು? ಎಂಬ ಬಗ್ಗೆ ಗುಜರಾತ್ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಈ ದಾಳಿ ಎಎಪಿ ಮತ್ತು ಬಿಜೆಪಿ ನಡುವೆ ರಾಜ್ಯದಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ.
    “ದೆಹಲಿ ಬಳಿಕ ಗುಜರಾತ್‌ನಲ್ಲಿಯೂ ದಾಳಿಗಳು ಆರಂಭವಾಗಿವೆ. ದೆಹಲಿಯಲ್ಲಿ ಏನೂ ಸಿಗಲಿಲ್ಲ, ಗುಜರಾತ್‌ನಲ್ಲಿಯೂ ಏನೂ ಸಿಕ್ಕಿಲ್ಲ. ನಾವು ಪ್ರಮಾಣಿಕರು” ಎಂದು ಅರವಿಂದ್ ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

    ಗುಜರಾತ್‌ ಬಿಜೆಪಿ ಘಟಕದ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದು, “ಎರಡು ಗಂಟೆಗಳ ಕಾಲ ಪರಿಶೀಲನೆ ನಡೆಸಿದರೂ ಪಕ್ಷದ ಕಚೇರಿಯಲ್ಲಿ ಪೊಲೀಸರಿಗೆ ಏನೂ ಸಿಕ್ಕಿಲ್ಲ. ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಪಕ್ಷಕ್ಕೆ ಸಿಗುತ್ತಿರುವ ಬೆಂಬಲ ನೋಡಿ ಅವರು ಆತಂಕಗೊಂಡಿದ್ದಾರೆ” ಎಂದು ಹೇಳಿದ್ದಾರೆ.

    ಎಎಪಿಯ ಗುಜರಾತ್ ಘಟಕ ಟ್ವೀಟ್ ಮಾಡಿ, “ದೆಹಲಿ ಬಳಿಕ ಅವರು ಈಗ ಗುಜರಾತ್‌ನಲ್ಲಿ ದಾಳಿ ನಡೆಸಿದ್ದಾರೆ. ಅದು ದೆಹಲಿ ಆಗಲಿ, ಗುಜರಾತ್ ಆಗಲಿ ಅವರಿಗೆ ಏನೂ ಸಿಗುವುದಿಲ್ಲ” ಎಂದು ಹೇಳಿದೆ.

    ಗುಜರಾತ್ ವಿಧಾನಸಭೆ ಚುನಾವಣೆ ಈ ವರ್ಷದ ಅಂತ್ಯದಲ್ಲಿ ನಡೆಯಲಿದೆ. ಪಕ್ಷಗಳು ಈಗಾಗಲೇ ತಯಾರಿ ಆರಂಭಿಸಿವೆ. ಗುಜರಾತ್‌ ಚುನಾವಣೆಗೆ ಎಎಪಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ. ಅರವಿಂದ್ ಕೇಜ್ರಿವಾಲ್ ರಾಜ್ಯದಲ್ಲಿ ಪ್ರಚಾರವನ್ನು ಸಹ ಪ್ರಾರಂಭಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ

    June 5, 2026

    ಪಾವಗಡ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಮಕ್ಕಳಲ್ಲಿ ಪರಿಸರ…

    ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ

    June 5, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.