ಗುಜರಾತ್ ವಿಧಾನಸಭಾ ಚುನಾವಣೆ ದಿನಗಣನೆ ನಡೆದಿರುವ ಬೆನ್ನಲ್ಲೇ 27 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದ 12 ಮಂದಿಯನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಬಂಡಾಯ ಘೋಷಿಸಿದವರಲ್ಲಿ 6 ಬಾರಿಯ ಶಾಸಕ ಹಾಗೂ ಇಬ್ಬರು ಮಾಜಿ ಶಾಸಕರು ಸೇರಿದ್ದಾರೆ. ಇವರಿಗೆ ಪಕ್ಷದಿಂದ ಟಿಕೆಟ್ ನಿರಾಕರಿಸಲಾಗಿದ್ದು, ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಗುಜರಾತ್ ನಲ್ಲಿ ಬಿಜೆಪಿಯಲ್ಲಿ ಬಂಡಾಯ ಘೋಷಿಸಿ ಚುನಾವಣೆಗೆ ಸ್ಪರ್ಧಿಸುತ್ತಿರುವವರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಇವರನ್ನು ಪಕ್ಷದಿಂದ 6 ವರ್ಷಗಳ ಅವಧಿಗೆ ಅಮಾನತುಗೊಳಿಸಲಾಗಿದೆ.
ಡಿಸೆಂಬರ್ 1ರಂದು ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ 7 ಮಂದಿ ಬಂಡಾಯ ಘೋಷಿಸಿದ್ದರು. ಇದೀಗ 12 ಮಂದಿ ಬಂಡಾಯ ಘೋಷಿಸಿದ್ದಾರೆ.
ಇತ್ತೀಚೆಗೆ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಪ್ರತಿ ಮೂರು ಕ್ಷೇತ್ರಕ್ಕೆ ಒಬ್ಬರಂತೆ ಬಿಜೆಪಿಯಲ್ಲಿ ಬಂಡಾಯ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಇದೀಗ ಗುಜರಾತ್ ನಲ್ಲೂ ಬಂಡಾಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಖಾಡಕ್ಕೆ ಇಳಿಯುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy